HomeIndia ಪುದುಚೇರಿ ಚುನಾವಣೆ: ಎನ್‌ಡಿಎ ಸೀಟು ಹಂಚಿಕೆ ಫೈನಲ್, ಬಿಜೆಪಿಗೆ ಎಷ್ಟು ಸೀಟು

 ಪುದುಚೇರಿ ಚುನಾವಣೆ: ಎನ್‌ಡಿಎ ಸೀಟು ಹಂಚಿಕೆ ಫೈನಲ್, ಬಿಜೆಪಿಗೆ ಎಷ್ಟು ಸೀಟು

30 ಸದಸ್ಯ ಬಲದ ಪುದುಚೇರಿ ವಿಧಾನಸಭೆ ಚುನಾವಣೆ ಏಪ್ರಿಲ್‌ 9ರಂದು ನಡೆಯಲಿದೆ, ಮೇ 4ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಎನ್‌ಡಿಎ ಮೈತ್ರಿಕೂಟ ವಿಧಾನಸಭೆ ಚುನಾವಣೆಗೆ ಸೀಟು ಹಂಚಿಕೆಯನ್ನು ಅಂತಿಮಗೊಳಿಸಿದೆ.

30 ಸೀಟುಗಳಲ್ಲಿ ಎಐಎನ್‌ಆರ್‌ಸಿ ಪಕ್ಷಕ್ಕೆ 16 ಮತ್ತು ಬಿಜೆಪಿಗೆ 14 ಸೀಟುಗಳನ್ನು ಅಂತಿಮಗೊಳಿಸಲಾಗಿದೆ. ಪುದುಚೇರಿ ಸಿಎಂ ಎನ್.ರಂಗಸ್ವಾಮಿ ಮತ್ತು ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ ಖಾಸಗಿ ಹೋಟೆಲ್‌ನಲ್ಲಿ ಸೀಟು ಹಂಚಿಕೆ ಮಾತುಕತೆ ಅಂತಿಮಗೊಳಿಸಿದ್ದಾರೆ.

14 ಸೀಟುಗಳಲ್ಲಿ ಬಿಜೆಪಿ ಎಐಎಡಿಎಂಕೆಗೆ 2, ಎಲ್‌ಜೆಕೆ ಪಕ್ಷಕ್ಕೆ 2 ಸೀಟುಗಳನ್ನು ಹಂಚಿಕೆ ಮಾಡಿದೆ. ಈ ಬಾರಿ ಚುನಾವಣೆಯಲ್ಲಿಯೂ ಬಿಜೆಪಿ ಮತ್ತು ರಾಜ್ಯದ ಆಡಳಿತ ಪಕ್ಷವಾದ ಎಐಎನ್‌ಆರ್‌ಸಿ ನಡುವಿನ ಮೈತ್ರಿ ಮುಂದುವರೆಯಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸೀಟು ಹಂಚಿಕೆಗಿಂತ ಮುಖ್ಯಮಂತ್ರಿ ಮತ್ತು ಎಐಎನ್‌ಆರ್‌ಸಿ ಮುಖ್ಯಸ್ಥ ಎನ್.ರಂಗಸಾಮಿ ಅವರು ಮೈತ್ರಿಕೂಟಕ್ಕೆ ಲಕ್ಷ್ಯ ಜನನಾಯಗ ಕಚ್ಚಾ (LJK) ಪಕ್ಷವನ್ನು ಸೇರಿಸಿಕೊಳ್ಳಲು ಒಪ್ಪಿಕೊಳ್ಳುವುದು ಪ್ರಮುಖವಾಗಿತ್ತು.

ಅವರು ಒಪ್ಪಿಗೆ ನೀಡಿದ ಬಳಿಕ ಸೀಟು ಹಂಚಿಕೆ ಅಂತಿಮಗೊಳಿಸಲಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಸಲಹೆಯ ಮೇರೆಗೆ ಹೊಸ ಪಕ್ಷವನ್ನು ಮೈತ್ರಿಕೂಟಕ್ಕೆ ಸೇರಿಸಿಕೊಳ್ಳಲಾಗಿದೆ ಮತ್ತು ಈ ನಿರ್ಧಾರವು ಮೈತ್ರಿಯನ್ನು ಇನ್ನಷ್ಟು ಬಲಪಡಿಸುತ್ತದೆ ಎಂದು ಬಿಜೆಪಿ ಹೇಳಿದೆ.

ಮನ್ಸುಖ್  ಮಾಂಡವೀಯ ಮಾತನಾಡಿ, “ಪುದುಚೇರಿಯಲ್ಲಿ ಎನ್‌ಡಿಎ ಮೈತ್ರಿಕೂಟವನ್ನು ರಂಗಸಾಮಿ ಅವರೇ ಮತ್ತೆ ಮುನ್ನಡೆಸಲಿದ್ದಾರೆ. ಅವರ ನೇತೃತ್ವದಲ್ಲೇ ಮುಂದಿನ ಸರ್ಕಾರ ರಚನೆಯಾಗಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಚುನಾವಣೆಗಾಗಿ ಮೈತ್ರಿಕೂಟವು ಸಾಮಾನ್ಯ ಕಾರ್ಯಯೋಜನೆಯನ್ನು ಸಿದ್ಧಪಡಿಸಿದೆ. ಪಕ್ಷಗಳು ತಮ್ಮದೇ ಆದ ಪ್ರತ್ಯೇಕ ಕಾರ್ಯಕ್ರಮಗಳನ್ನು ಉಳಿಸಿಕೊಳ್ಳಲು ಅವಕಾಶ ನೀಡಲಾಗಿದೆ.

ಪುದುಚೇರಿಗೆ ರಾಜ್ಯದ ಸ್ಥಾನಮಾನ ನೀಡಬೇಕೆಂಬ ಎಐಎನ್‌ಆರ್‌ಸಿ ಬೇಡಿಕೆಯು ಆ ಪಕ್ಷದ ವೈಯಕ್ತಿಕ ಆಶಯವಾಗಿದೆ ಎಂದು ಬಿಜೆಪಿ ನಾಯಕರು ಸ್ಪಷ್ಟಪಡಿಸಿದ್ದಾರೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular