ಚೆನ್ನೈ: 2026 ರ ಚುನಾವಣೆಗೆ ಮುನ್ನ ತಮಿಳುನಾಡಿನಲ್ಲಿ ಎಐಎಡಿಎಂಕೆ ಜೊತೆ ಬಿಜೆಪಿ ಮೈತ್ರಿ ಘೋಷಿಸಿದೆ, ಇಪಿಎಸ್ ಮುಖ್ಯಮಂತ್ರಿ ಅಭ್ಯರ್ಥಿಯಾಗಲಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಮಹತ್ವದ ಘೋಷಣೆ ಮಾಡಿದ್ದು, ಎಐಎಡಿಎಂಕೆ ಮತ್ತು ಬಿಜೆಪಿ ನಾಯಕರು ಎರಡೂ ಪಕ್ಷಗಳು ಎನ್ಡಿಎ ಆಗಿ ಒಟ್ಟಾಗಿ ಸ್ಪರ್ಧಿಸುವುದಾಗಿ ನಿರ್ಧರಿಸಿದ್ದಾರೆ ಎಂದು ಹೇಳಿದ್ದಾರೆ.
ತಮಿಳುನಾಡು ವಿಧಾನಸಭಾ ಚುನಾವಣೆಗೆ ಎನ್ಡಿಎ ಮೈತ್ರಿಕೂಟದ ಬಗ್ಗೆ ವಿವರಗಳನ್ನು ನೀಡಿದ ಅಮಿತ್ ಶಾ, ಈ ಚುನಾವಣೆಗಳು ರಾಷ್ಟ್ರೀಯ ಮಟ್ಟದಲ್ಲಿ ಪ್ರಧಾನಿ ಮೋದಿ ನೇತೃತ್ವದಲ್ಲಿ ಮತ್ತು ರಾಜ್ಯ ಮಟ್ಟದಲ್ಲಿ ಎಐಎಡಿಎಂಕೆ ನಾಯಕ ಎಡಪ್ಪಾಡಿ ಕೆ. ಪಳನಿಸ್ವಾಮಿ ನೇತೃತ್ವದಲ್ಲಿ ನಡೆಯಲಿವೆ ಎಂದು ಹೇಳಿದ್ದಾರೆ.
ಎಐಎಡಿಎಂಕೆಗೆ ಯಾವುದೇ ಷರತ್ತುಗಳು ಮತ್ತು ಬೇಡಿಕೆಗಳಿಲ್ಲ. ಎಐಎಡಿಎಂಕೆಯ ಆಂತರಿಕ ವಿಷಯಗಳಲ್ಲಿ ನಮಗೆ ಯಾವುದೇ ಹಸ್ತಕ್ಷೇಪವಿರುವುದಿಲ್ಲ. ಈ ಮೈತ್ರಿ ಎನ್ಡಿಎ ಮತ್ತು ಎಐಎಡಿಎಂಕೆ ಎರಡಕ್ಕೂ ಪ್ರಯೋಜನಕಾರಿಯಾಗಲಿದೆ ಎಂದು ಹೇಳಿದ್ದಾರೆ.
ಚೆನ್ನೈನಲ್ಲಿ ಬಿಜೆಪಿಯ ಕೆ. ಅಣ್ಣಾಮಲೈ ಮತ್ತು ಎಐಎಡಿಎಂಕೆಯ ಎಡಪ್ಪಾಡಿ ಪಳನಿಸ್ವಾಮಿ ಅವರೊಂದಿಗೆ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅಮಿತ್ ಶಾ, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಎನ್ಡಿಎ ಮತ್ತೆ ಭರ್ಜರಿ ಬಹುಮತ ಗಳಿಸಿ ತಮಿಳುನಾಡಿನಲ್ಲಿ ಸರ್ಕಾರ ರಚಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
AIADMK, BJP revive ties, will contest upcoming Assembly polls in Tamil Nadu together, says Amit Shah
— ANI Digital (@ani_digital) April 11, 2025
Read @ANI Story | https://t.co/nXn9KH9g6n#AIADMK #BJP #AmitShah #TamilNadu pic.twitter.com/hn36D45n2X