HomeLatest NewsBREAKING : ಕರ್ನಾಟಕದ 2 ಕ್ಷೇತ್ರಗಳ ಉಪಚುನಾವಣೆಗೆ ಅಭ್ಯರ್ಥಿ ಘೋಷಣೆ ಮಾಡಿದ ಬಿಜೆಪಿ.!

BREAKING : ಕರ್ನಾಟಕದ 2 ಕ್ಷೇತ್ರಗಳ ಉಪಚುನಾವಣೆಗೆ ಅಭ್ಯರ್ಥಿ ಘೋಷಣೆ ಮಾಡಿದ ಬಿಜೆಪಿ.!

ರಾಜ್ಯದ ಕುತೂಹಲ ಕೆರಳಿಸಿರುವ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ತನ್ನ ಅಭ್ಯರ್ಥಿಗಳನ್ನು ಅಧಿಕೃತವಾಗಿ ಘೋಷಿಸಿದೆ.

ಏಪ್ರಿಲ್ 9 ರಂದು ನಡೆಯಲಿರುವ ಈ ಮಹತ್ವದ ಸಮರಕ್ಕೆ ಬಾಗಲಕೋಟೆಯಿಂದ ಮಾಜಿ ಶಾಸಕ ವೀರಣ್ಣ ಚರಂತಿಮಠ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರದಿಂದ ಶ್ರೀನಿವಾಸ್ ಟಿ. ದಾಸಕರಿಯಪ್ಪ ಅವರಿಗೆ ಟಿಕೆಟ್ ನೀಡಲಾಗಿದೆ.

ಹೌದು.   ರಾಜ್ಯದ ಕುತೂಹಲ ಕೆರಳಿಸಿರುವ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ತನ್ನ ಅಭ್ಯರ್ಥಿಗಳನ್ನು ಅಧಿಕೃತವಾಗಿ ಪ್ರಕಟಿಸಿದೆ. ಮಾಜಿ ಸಚಿವರಾದ ಎಚ್.ವೈ. ಮೇಟಿ ಮತ್ತು ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಈ ಎರಡು ಕ್ಷೇತ್ರಗಳಿಗೆ ಏಪ್ರಿಲ್ 9, 2026 ರಂದು ಮತದಾನ ನಡೆಯಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿಜೆಪಿ ಅಭ್ಯರ್ಥಿಗಳು:

ಬಾಗಲಕೋಟೆ ವಿಧಾನಸಭಾ ಕ್ಷೇತ್ರ: ಮಾಜಿ ಶಾಸಕ ವೀರಣ್ಣ ಚರಂತಿಮಠ ಅವರಿಗೆ ಮತ್ತೊಮ್ಮೆ ಟಿಕೆಟ್ ನೀಡಲಾಗಿದೆ. ಲಿಂಗಾಯತ ಸಮುದಾಯದ ಪ್ರಭಾವಿ ನಾಯಕರಾಗಿರುವ ಇವರು ಕ್ಷೇತ್ರದಲ್ಲಿ ತಮ್ಮದೇ ಆದ ಹಿಡಿತ ಹೊಂದಿದ್ದಾರೆ.

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ: ಇಲ್ಲಿ ಶ್ರೀನಿವಾಸ್ ಟಿ. ದಾಸಕರಿಯಪ್ಪ ಅವರನ್ನು ಕಣಕ್ಕಿಳಿಸುವ ಮೂಲಕ ಬಿಜೆಪಿ ಹೊಸ ಮುಖಕ್ಕೆ ಮಣೆ ಹಾಕಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular