HomeIndia4 ರಾಜ್ಯಗಳಿಗೆ ಬಿಜೆಪಿ ಚುನಾವಣಾ ಉಸ್ತುವಾರಿ ನೇಮಕ: ರಾಜಸ್ಥಾನಕ್ಕೆ ಪ್ರಹ್ಲಾದ್ ಜೋಶಿ

4 ರಾಜ್ಯಗಳಿಗೆ ಬಿಜೆಪಿ ಚುನಾವಣಾ ಉಸ್ತುವಾರಿ ನೇಮಕ: ರಾಜಸ್ಥಾನಕ್ಕೆ ಪ್ರಹ್ಲಾದ್ ಜೋಶಿ

ನವದೆಹಲಿ: ಬಿಜೆಪಿ ಶುಕ್ರವಾರ ರಾಜಸ್ಥಾನ, ಛತ್ತೀಸ್‌ಗಢ, ಮಧ್ಯಪ್ರದೇಶ ಮತ್ತು ತೆಲಂಗಾಣದ ಚುನಾವಣಾ ಉಸ್ತುವಾರಿಗಳು ಮತ್ತು ಸಹ ಉಸ್ತುವಾರಿಗಳ ಹೆಸರನ್ನು ಪ್ರಕಟಿಸಿದೆ.

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರನ್ನು ರಾಜಸ್ಥಾನದ ಚುನಾವಣಾ ಉಸ್ತುವಾರಿಯನ್ನಾಗಿ ಮಾಡಲಾಗಿದೆ, ಜೊತೆಗೆ ಸಹ ಉಸ್ತುವಾರಿಗಳಾದ ನಿತಿನ್ ಪಟೇಲ್, ಗುಜರಾತ್ ಮಾಜಿ ಉಪಮುಖ್ಯಮಂತ್ರಿ ಮತ್ತು ಹರಿಯಾಣ ನಾಯಕ ಕುಲದೀಪ್ ಬಿಷ್ಣೋಯ್ ಅವರನ್ನು ನೇಮಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಛತ್ತೀಸ್‌ಗಢದಲ್ಲಿ ಪಕ್ಷದ ಹಿರಿಯ ನಾಯಕ ಓಂ ಪ್ರಕಾಶ್ ಮಾಥುರ್ ಜೊತೆಗೆ ಕೇಂದ್ರ ಸಚಿವ ಮನ್ಸುಖ್ ಮಾಂಡವಿಯಾ ಸಹ ಉಸ್ತುವಾರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ.

ಕೇಂದ್ರ ಸಚಿವ ಭೂಪೇಂದ್ರ ಯಾದವ್ ಅವರನ್ನು ಮಧ್ಯಪ್ರದೇಶದ ಚುನಾವಣಾ ಉಸ್ತುವಾರಿ ಎಂದು ಘೋಷಿಸಲಾಗಿದೆ. ಅವರು ಅಶ್ವನಿ ವೈಷ್ಣವ್ ಅವರೊಂದಿಗೆ ಸಹ ಉಸ್ತುವಾರಿಯಾಗಿ ಕೆಲಸ ಮಾಡುತ್ತಾರೆ.

ಚುನಾವಣೆ ನಡೆಯಲಿರುವ ತೆಲಂಗಾಣದಲ್ಲಿ ಮಾಜಿ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಅವರು ಚುನಾವಣಾ ಉಸ್ತುವಾರಿಯಾಗಲಿದ್ದು, ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸುನೀಲ್ ಬನ್ಸಾಲ್ ಸಹ ಉಸ್ತುವಾರಿಯಾಗಲಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular