ಶಿಗ್ಗಾವಿ- ಭಾರತೀಯ ಜನತಾ ಪಾರ್ಟಿಯ ವತಿಯಿಂದ ರಾಜ್ಯದ ಭ್ರಷ್ಟ ಕಾಂಗ್ರೇಸ್ ಸರ್ಕಾರದ ಆಡಳಿತ ವೈಪಲ್ಯ ಮತ್ತು ರೈತ ವಿರೋಧಿ ಧೋರಣೆಯ ವಿರುದ್ಧ ಏರ್ಪಡಿಸಿದ ಬಳ್ಳಾರಿ ಚಲೋ ಪಾದಯಾತ್ರೆಯಲ್ಲಿ ಶಿಗ್ಗಾಂವ ಸವಣೂರ ವಿಧಾನ ಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಯುವ ಮುಖಂಡರಾದ ಭರತ ಬೊಮ್ಮಾಯಿರವರು ಭಾಗವಹಿಸಿ ರಾಜ್ಯ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.
ಗಂಗಾವತಿಯಿಂದ ಕಂಪ್ಲಿವರೆಗೆ ನಡೆದ ಪಾದಯಾತ್ರೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಸಾಥ್ ನೀಡಿದ ಬಿಜೆಪಿ ಯುವ ಮುಖಂಡ ಭರತ್ ಬೊಮ್ಮಾಯಿ, ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದ್ದು ವಾಲ್ಮೀಕಿ ನಿಗಮದ ಹಣ ನುಂಗಿ ಎಸ್ಟಿ ಸಮುದಾಯಕ್ಕೆ ದ್ರೋಹ ಮಾಡಿದೆ. ರಾಜ್ಯದಲ್ಲಿ ತೀವ್ರ ಬರ ಉಂಟಾಗಿದ್ದು, ಇನ್ನೂ ಎಪ್ಪತೈದು ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಣೆ ಮಾಡಿ ತಕ್ಷಣ ಬರ ಪರಿಹಾರ ಹಣ ಬಿಡುಗಡೆ ಮಾಡಿ ರೈತರ ನೆರವಿಗೆ ಬರಬೇಕು ಎಂದು ಆಗ್ರಹಿಸಿದ್ದಾರೆ.
ಬಳ್ಳಾರಿ ಚಲೊ ಪಾದಯಾತ್ರೆಯಲ್ಲಿ ಪ್ರತಿದಿನ ರೈತರು, ಮಹಿಳೆರು, ಕೂಲಿ ಕಾರ್ಮಿಕರು ಸ್ವಯಂ ಪ್ರೇರಿತವಾಗಿ ಭಾಗವಹಿಸುತ್ತಿರುವುದು ರಾಜ್ಯ ಸರ್ಕಾರದ ವಿರುದ್ದ ಜನರಿಗಿರುವ ಆಕ್ರೋಶವನ್ನು ತೋರಿಸುತ್ತದೆ. ಬಿಜೆಪಿಯ ಈ ಪಾದಯಾತ್ರೆ ರಾಜ್ಯ ಸರ್ಕಾರಕ್ಕೆ ನಡುಕ ಹುಟ್ಟಿಸಿದೆ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.
ಈ ಸಂಧರ್ಭದಲ್ಲಿ ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷರಾದ ಬಿ.ವೈ ವಿಜಯೇಂದ್ರ, ರಾಜ್ಯ ಯುವ ಮೋರ್ಚಾ ಅಧ್ಯಕ್ಷರಾದ ಧೀರಜ್ ಮುನಿರಾಜು ಸೇರಿದಂತೆ ಪಕ್ಷದ ಪ್ರಮುಖರು ಹಾಜರಿದ್ದರು

