HomeKarnatakaಚುನಾವಣೆ ಹೊತ್ತಲ್ಲೇ ಬಿಜೆಪಿ ಬಿಗ್ ಶಾಕ್; ಮಾಜಿ ಶಾಸಕ, ಆರ್.ಎಸ್.ಎಸ್. ಕಟ್ಟಾಳು ಗುರುಸಿದ್ದನಗೌಡ ಕಾಂಗ್ರೆಸ್ ಸೇರ್ಪಡೆ

ಚುನಾವಣೆ ಹೊತ್ತಲ್ಲೇ ಬಿಜೆಪಿ ಬಿಗ್ ಶಾಕ್; ಮಾಜಿ ಶಾಸಕ, ಆರ್.ಎಸ್.ಎಸ್. ಕಟ್ಟಾಳು ಗುರುಸಿದ್ದನಗೌಡ ಕಾಂಗ್ರೆಸ್ ಸೇರ್ಪಡೆ

ದಾವಣಗೆರೆ: ದಾವಣಗೆರೆ ಲೋಕಸಭಾ ಬಿಜೆಪಿ ಟಿಕೆಟ್ ಸಂಸದ ಸಿದ್ದೇಶ್ವರ್ ಪತ್ನಿಗೆ ನೀಡಿರುವುದು ಹಲವರ ಅಸಮಾಧಾನಕ್ಕೆ ಕಾರಣವಾಗಿದೆ. ಬಿಜೆಪಿಯಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಈ ನಡುವೆ ಮಾಜಿ ಶಾಸಕ, ಆರ್. ಎಸ್.ಎಸ್ ಕಟ್ಟಾಳು ಬಿಜೆಪಿ ತೊರೆದು ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ.

ಲೋಕಸಭಾ ಚುನಾವಣೆ ಸಮೀಪಿಸುತ್ತಿರುವಾಗಲೇ ಬಿಜೆಪಿಗೆ ಬಿಗ್ ಶಾಕ್ ಎದುರಾಗಿದೆ. ಆರ್.ಎಸ್.ಎಸ್ ನಲ್ಲಿ ಪ್ರಮುಖವಾಗಿ ಗುರುತಿಸಿಕೊಂಡಿದ್ದ ಟಿ.ಗುರುಸಿದ್ದನಗೌಡ ಬಿಜೆಪಿ ಬಿಟ್ಟು ದಿಢೀರ್ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

ಜಗಳೂರು ಕ್ಷೇತ್ರದ ಮಾಜಿ ಶಾಸಕರಾಗಿದ್ದ ಟಿ.ಗುರುಸಿದ್ದನಗೌಡ ಅವರ ನಿವಾಸಕ್ಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಭೇಟಿ ನೀಡಿದ್ದು, ಈ ವೇಳೆ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೇ ವೇಳೆ ದಾವಣಗೆರೆ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಗುರುಸಿದ್ದನಗೌಡ ಅವರ ಪುತ್ರ ಡಾ.ರವಿಕುಮಾರ್ ಕೂಡ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular