ಬಹಿರಂಗ ಪ್ರಚಾರ ಕೊನೆ ದಿನ 14 ಕ್ಷೇತ್ರಗಳಲ್ಲೂ ಬಿಜೆಪಿ ಭರ್ಜರಿ ಪ್ರಚಾರ

ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದಲ್ಲಿ ಲೋಕಸಭೆ ಚುನಾವಣೆ ನಡೆಯುತ್ತಿರುವ 14 ಕ್ಷೇತ್ರಗಳಲ್ಲಿ ಭಾನುವಾರ ಸಂಜೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ.

ಕೊನೆ ಕ್ಷಣದಲ್ಲಿ ಭರ್ಜರಿ ಪ್ರಚಾರ ಕೈಗೊಂಡಿರುವ ಬಿಜೆಪಿ ಎಲ್ಲಾ 14 ಕ್ಷೇತ್ರಗಳಲ್ಲಿಯೂ ಬೈಕ್ ರ್ಯಾಲಿ, ಪಾದಯಾತ್ರೆ ಮೂಲಕ ಮತದಾರರನ್ನು ಸೆಳೆಯುವ ಅಂತಿಮ ಕ್ಷಣದ ಪ್ರಯತ್ನ ನಡೆಸಲಿದೆ.

ಚುನಾವಣಾ ನಿರ್ವಹಣಾ ಸಮಿತಿ ರಾಜ್ಯ ಸಂಚಾಲಕ ವಿ. ಸುನಿಲ್ ಕುಮಾರ್ ಈ ಬಗ್ಗೆ ಮಾಹಿತಿ ನೀಡಿದ್ದು, 14 ಕ್ಷೇತ್ರಗಳಲ್ಲಿ ಭಾನುವಾರ ಎಲ್ಲಾ ಪ್ರಮುಖರು, ಕಾರ್ಯಕರ್ತರು ಮತದಾರರ ಮನೆ ಮನಗಳನ್ನು ತಲುಪಲು ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಭಾನುವಾರ ಬೆಳಗ್ಗೆ ಪ್ರಮುಖರು ಸಾಮಾಜಿಕ ಕಾರ್ಯಕರ್ತರ ಮನೆಯಲ್ಲಿ ಉಪಹಾರ ಸೇವಿಸಲಿದ್ದು, ಪ್ರಮುಖ ಮಹನೀಯರ ಪುತ್ಥಳಿಗಳಿಗೆ ಮಾಲಾರ್ಪಣೆ ಮಾಡಲಿದ್ದಾರೆ. ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪತ್ರಿಕಾಗೋಷ್ಠಿ ನಡೆಯಲಿದೆ. ಮನೆ ಮನೆ ಸಂಪರ್ಕ, ಬೈಕ್ ರಾಲಿ ಪಾದಯಾತ್ರೆ ನಡೆಸಲಾಗುವುದು. ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಬಸವರಾಜ್ ಬೊಮ್ಮಾಯಿ, ಡಿ.ವಿ. ಸದಾನಂದ ಗೌಡ, ಜಗದೀಶ್ ಶೆಟ್ಟರ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ, ಶೋಭಾ ಕರಂದ್ಲಾಜೆ, ಭಗವಂತ ಖೂಬಾ, ಪಕ್ಷದ ನಾಯಕರ ಸಿ.ಟಿ. ರವಿ, ತೇಜಸ್ವಿ ಸೂರ್ಯ, ಯದುವೀರ್ ಒಡೆಯರ್, ಕೋಟ ಶ್ರೀನಿವಾಸ ಪೂಜಾರಿ, ಛಲವಾದಿ ನಾರಾಯಣ ಸ್ವಾಮಿ ಸೇರಿದಂತೆ ಪಕ್ಷದ ನಾಯಕರು ವಿವಿಧ ಜಿಲ್ಲೆಗಳಲ್ಲಿ ಪ್ರಚಾರ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read