HomeKarnatakaBIG NEWS: ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ನಾಮಪತ್ರ ಸಲ್ಲಿಕೆ

BIG NEWS: ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ನಾಮಪತ್ರ ಸಲ್ಲಿಕೆ

ಬೆಂಗಳೂರು: ಲೋಕಸಭಾ ಚುನಾವಣಾ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಇಂದು ನಾಮಪತ್ರ ಸಲ್ಲಿಕೆಗೆ ಕೊನೇ ದಿನವಾಗಿದ್ದು, ಘಟಾನುಘಟಿ ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ.

ಹೈವೋಲ್ಟೇಜ್ ಅಖಾಡ ಎಂದೇ ಬಿಂಬಿತವಾಗಿರುವ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಡಾ.ಸಿ.ಎನ್.ಮಂಜುನಾಥ್ ನಾಮಪತ್ರ ಸಲ್ಲಿಕೆ ಮಾಡಿದರು. ಈ ವೇಳೆ ಸಿ.ಎನ್.ಮಂಜುನಾಥ್ ಪತ್ನಿ ಹಾಗೂ ಶಾಸಕ ಅಶ್ವತ್ಥನಾರಾಯಣ ಉಪಸ್ಥಿತರಿದ್ದರು.

ಇದಕ್ಕೂ ಮುನ್ನ ಡಾ.ಸಿ.ಎನ್.ಮಂಜುನಾಥ್ ಹಾಗೂ ಪತ್ನಿ ಅನಸೂಯ ರಾಮನಗರ ಚಾಮುಂಡೇಶ್ವರಿ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ PWD ಸರ್ಕಲ್ ನಿಂದ ಜಿಲ್ಲಾಧಿಕಾರಿಕಚೇರಿ ವರೆಗೆ ಮೆರವಣಿಗೆ ಮೂಲಕ ಆಗಮಿಸಿ, ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular