HomeKarnatakaಶೆಟ್ಟರ್, ಲಿಂಬಾವಳಿ, ರಾಮದಾಸ್ ಸೇರಿ 12 ಕ್ಷೇತ್ರಗಳ ಟಿಕೆಟ್ ಘೋಷಣೆ ಬಾಕಿ: ಸೋಮಣ್ಣ, ಈಶ್ವರಪ್ಪ ಪುತ್ರರಿಗೆ...

ಶೆಟ್ಟರ್, ಲಿಂಬಾವಳಿ, ರಾಮದಾಸ್ ಸೇರಿ 12 ಕ್ಷೇತ್ರಗಳ ಟಿಕೆಟ್ ಘೋಷಣೆ ಬಾಕಿ: ಸೋಮಣ್ಣ, ಈಶ್ವರಪ್ಪ ಪುತ್ರರಿಗೆ ಟಿಕೆಟ್ ಸಾಧ್ಯತೆ

ಬೆಂಗಳೂರು: ಮಂಗಳವಾರ 189 ಕ್ಷೇತ್ರಗಳ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದ ಬಿಜೆಪಿ, ಎರಡನೇ ಪಟ್ಟಿಯಲ್ಲಿ 23 ಅಭ್ಯರ್ಥಿಗಳ ಹೆಸರು ಪ್ರಕಟಿಸಿದೆ. ಇನ್ನೂ 12 ಕ್ಷೇತ್ರಗಳ ಟಿಕೆಟ್ ಬಾಕಿ ಉಳಿಸಿಕೊಂಡಿದೆ.

ಹಾಲಿ ಶಾಸಕರಾಗಿರುವ ಜಗದೀಶ್ ಶೆಟ್ಟರ್, ಅರವಿಂದ ಲಿಂಬಾವಳಿ, ಎಸ್.ಎ. ರಾಮದಾಸ್, ಕಳಕಪ್ಪ ಬಂಡಿ ಅವರ ಪ್ರತಿನಿಧಿಸುವ ಕ್ಷೇತ್ರಗಳಿಗೆ ಟಿಕೆಟ್ ಬಾಕಿ ಉಳಿದಿದೆ. ಚುನಾವಣೆ ರಾಜಕೀಯದಿಂದ ಹಿಂದೆ ಸರಿದ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಪ್ರತಿನಿಧಿಸುವ ಶಿವಮೊಗ್ಗ ನಗರ, ವಿ. ಸೋಮಣ್ಣ ಪ್ರತಿನಿಧಿಸುವ ಗೋವಿಂದರಾಜ ನಗರ ಕ್ಷೇತ್ರದಿಂದ ಅವರ ಪುತ್ರರಿಗೆ ಟಿಕೆಟ್ ನೀಡುವ ಕುರಿತು ಚಿಂತನೆ ನಡೆದಿದೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜಗದೀಶ್ ಶೆಟ್ಟರ್ ದೆಹಲಿಗೆ ಹೋಗಿ ವರಿಷ್ಠರ ಭೇಟಿಯಾಗಿದ್ದಾರೆ. ಮಹಾದೇವಪುರ ಕ್ಷೇತ್ರದ ಅರವಿಂದ ಲಿಂಬಾವಳಿ ಅವರಿಗೂ ಎರಡನೇ ಪಟ್ಟಿಯಲ್ಲಿ ಟಿಕೆಟ್ ನೀಡಿಲ್ಲ. ಕೃಷ್ಣರಾಜ ಶಾಸಕ ರಾಮದಾಸ್ ಅವರಿಗೆ ಟಿಕೆಟ್ ಸಿಕ್ಕಿಲ್ಲ.

ಎರಡನೇ ಪಟ್ಟಿ ಎಲ್ಲೂ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಗೆ ಟಿಕೆಟ್ ಸಿಕ್ಕಿಲ್ಲ. ಸಚಿವ ಸೋಮಣ್ಣ ಪುತ್ರ ಅರುಣ್ ಸೋಮಣ್ಣ ಗುಬ್ಬಿ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಯಡಿಯೂರಪ್ಪ ಸಂಬಂಧಿ ಎನ್.ಆರ್. ಸಂತೋಷ್ ಅರಸೀಕೆರೆ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಅವರಿಗೂ ಟಿಕೆಟ್ ಮಿಸ್ ಆಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular