HomeKarnatakaಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿಯಲ್ಲೂ ಬಿಗ್ ಟ್ವಿಸ್ಟ್: ಆಕಾಂಕ್ಷಿಗಳಿಗೆ ಬಿಗ್ ಶಾಕ್

ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿಯಲ್ಲೂ ಬಿಗ್ ಟ್ವಿಸ್ಟ್: ಆಕಾಂಕ್ಷಿಗಳಿಗೆ ಬಿಗ್ ಶಾಕ್

ಬೆಂಗಳೂರು: ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆಯಾಗಿದ್ದು, 10 ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಮೂರನೇ ಪಟ್ಟಿಯಲ್ಲೂ ಹಲವು ಆಕಾಂಕ್ಷಿಗಳಿಗೆ ನಿರಾಸೆಯಾಗಿದೆ.

ಮೈಸೂರಿನ ಕೃಷ್ಣರಾಜ ಕ್ಷೇತ್ರದ ಹಾಲಿ ಶಾಸಕ ಎಸ್.ಎ. ರಾಮದಾಸ್ ಅವರಿಗೆ ಟಿಕೆಟ್ ಕೈತಪ್ಪಿದೆ. ರಾಮದಾಸ್ ಬದಲಿಗೆ ಶ್ರೀವತ್ಸ ಅವರಿಗೆ ಟಿಕೆಟ್ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಚಿವ ವಿ. ಸೋಮಣ್ಣ ಪುತ್ರ ಅರುಣ್ ಸೋಮಣ್ಣ ಅವರಿಗೆ ಕೂಡ ಟಿಕೆಟ್ ಕೈತಪ್ಪಿದೆ. ಸೋಮಣ್ಣ ಪ್ರತಿನಿಧಿಸುತ್ತಿದ್ದ ಗೋವಿಂದರಾಜನಗರ ಕ್ಷೇತ್ರದಲ್ಲಿ ಅರುಣ್ ಸೋಮಣ್ಣ ಟಿಕೆಟ್ ಆಕಾಂಕ್ಷಿಯಾಗಿದ್ದರು. ಸೋಮಣ್ಣ ಅವರಿಗೆ ವರುಣಾ ಮತ್ತು ಚಾಮರಾಜನಗರದ ಟಿಕೆಟ್ ನೀಡಲಾಗಿದೆ. ಮಹದೇವಪುರದಲ್ಲಿ ಅರವಿಂದ ಲಿಂಬಾವಳಿ ಅವರಿಗೆ ಟಿಕೆಟ್ ಕೈತಪ್ಪಿದೆ. ಅವರ ಬದಲು ಪತ್ನಿ ಮಂಜುಳಾ ಲಿಂಬಾವಳಿ ಅವರಿಗೆ ಬಿಜೆಪಿ ಟಿಕೆಟ್ ಘೋಷಿಸಿದೆ.

ಜಗದೀಶ್ ಶೆಟ್ಟರ್ ಪ್ರತಿನಿಧಿಸುತ್ತಿದ್ದ ಹುಬ್ಬಳ್ಳಿ -ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಮಹೇಶ್ ಟೆಂಗಿನ ಕಾಯಿ ಅವರಿಗೆ ಟಿಕೆಟ್ ನೀಡಲಾಗಿದೆ.

ಈಶ್ವರಪ್ಪ ಪ್ರತಿನಿಧಿಸುವ ಶಿವಮೊಗ್ಗ ಕ್ಷೇತ್ರಕ್ಕೆ ಹಾಗೂ ಮಾನ್ವಿ ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿಲ್ಲ.

ಗೋವಿಂದ ಕಾರಜೋಳ ಪುತ್ರ ಗೋಪಾಲ್ ಕಾರಜೋಳ ಅವರಿಗೆ ನಾಗಠಾಣ ಟಿಕೆಟ್ ಕೈತಪ್ಪಿದೆ. ಸಂಗಣ್ಣ ಕರಡಿ ಸೊಸೆ ಮಂಜುಳಾ ಅಮರೇಶ್ ಅವರಿಗೆ ಕೊಪ್ಪಳ ಬಿಜೆಪಿ ಟಿಕೆಟ್ ನೀಡಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular