HomeKarnatakaBIG NEWS: ಅನಂತ್ ಕುಮಾರ್ ಹೆಗಡೆಯಿಂದ ಸಂವಿಧಾನ ತಿದ್ದುಪಡಿ ಹೇಳಿಕೆ: ಅವರ ವೈಯಕ್ತಿಕ ಅಭಿಪ್ರಾಯ ಎಂದ...

BIG NEWS: ಅನಂತ್ ಕುಮಾರ್ ಹೆಗಡೆಯಿಂದ ಸಂವಿಧಾನ ತಿದ್ದುಪಡಿ ಹೇಳಿಕೆ: ಅವರ ವೈಯಕ್ತಿಕ ಅಭಿಪ್ರಾಯ ಎಂದ ಬಿಜೆಪಿ

ಬೆಂಗಳೂರು: ಸಂವಿಧಾನ ತಿದ್ದುಪಡಿ ಕುರಿತು ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ನೀಡಿರುವ ಹೇಳಿಕೆ ವಿವಾದಕ್ಕೆ ಕಾರಣವಾಗಿದ್ದು, ಅನಂತ್ ಕುಮಾರ್ ಹೆಗಡೆ ಸಂಸದ ಸ್ಥಾನ ಅನರ್ಹಗೊಳಿಸುವಂತೆ ಕಾಂಗ್ರೆಸ್ ಆಗ್ರಹಿಸಿದೆ.

ವಿವಾದ ತೀವ್ರವಾಗುತ್ತಿದ್ದಂತೆ ರಾಜ್ಯ ಬಿಜೆಪಿ ಪ್ರತಿಕ್ರಿಯೆ ನೀಡಿದ್ದು, ಸಂವಿಧಾನ ತಿದ್ದುಪಡಿ ಕುರಿತ ಅನಂತ್ ಕುಮಾರ್ ಹೆಗಡೆ ಹೇಳಿಕೆ ಅವರ ವೈಯಕ್ತಿಕ ಅಭಿಪ್ರಾಯ ಎಂದು ತಿಳಿಸಿದೆ.

ಅನಂತ್ ಕುಮಾರ್ ಹೆಗಡೆ ಅವರ ಈ ಹೇಳಿಕೆ ಬಗ್ಗೆ ಅವರಿಂದ ವಿವರಣೆ ಪಡೆಯಲಾಗುವುದು. ಸಂವಿಧಾನದ ಬಗ್ಗೆ ಅನಂತ್ ಕುಮಾರ್ ಹೆಗಡೆ ನೀಡಿರುವ ಹೇಳಿಕೆ ಪಕ್ಷದ ನಿಲುವನ್ನು ಪ್ರತಿಬಿಂಬಿಸುವುದಿಲ್ಲ. ರಾಷ್ಟ್ರದ ಸಂವಿಧಾನವನ್ನು ಎತ್ತಿ ಹಿಡಿಯುವ ನಮ್ಮ ಅಚಲ ಬದ್ಧತೆಯನ್ನು ಬಿಜೆಪಿ ಪುನರುಚ್ಛರಿಸುತ್ತದೆ ಎಂದು ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular