ರಾಜ್ಯ ಕಾಂಗ್ರೆಸ್ ಸರ್ಕಾರ ಬೀಳಿಸಲು ಬಿಜೆಪಿ ಯತ್ನ: ಶಾಸಕರಿಗೆ ತಲಾ 50 ಕೋಟಿ ಆಮಿಷ: ಸಿಎಂ ಸಿದ್ಧರಾಮಯ್ಯ ಸ್ಪೋಟಕ ಹೇಳಿಕೆ

ಮೈಸೂರು: ಕಾಂಗ್ರೆಸ್ ಪಕ್ಷಕ್ಕೆ 136 ಶಾಸಕ ಸ್ಥಾನದ ಬಲವಿದ್ದರೂ ಸರ್ಕಾರ ಅಲುಗಾಡಿಸಲು ಬಿಜೆಪಿ ಪ್ರಯತ್ನ ನಡೆಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಕಾಂಗ್ರೆಸ್ ಪಕ್ಷದ ಒಬ್ಬೊಬ್ಬ ಶಾಸಕರಿಗೆ ಬಿಜೆಪಿ 50 ಕೋಟಿ ರೂ. ಆಮಿಷ ಒಡ್ಡುತ್ತಿದೆ. ಬಿಜೆಪಿಯ 50 ಕೋಟಿ ರೂ. ಆಮಿಷಕ್ಕೆ ಕಾಂಗ್ರೆಸ್ ಶಾಸಕರು ಬಗ್ಗಿಲ್ಲ. ಸರ್ಕಾರ ಬೀಳಿಸುವುದು ಬಿಜೆಪಿಯವರಿಗೆ ಅಭ್ಯಾಸವಾಗಿ ಹೋಗಿದೆ. ಅವರು ಯಾವತ್ತೂ ನೇರವಾಗಿ ಚುನಾವಣೆಯನ್ನೇ ಮಾಡಿಲ್ಲ. ದೇಶದ ಬೇರೆ ರಾಜ್ಯಗಳಲ್ಲಿ ಸರ್ಕಾರ ಅತಂತ್ರ ಮಾಡುವ ಪ್ರಯತ್ನ ನಡೆಸಿದ್ದಾರೆ. ರಾಜ್ಯದಲ್ಲಿ ನಮ್ಮ ಸರ್ಕಾರ ಅಲುಗಾಡಿಸಲು ಬಿಜೆಪಿ ಯತ್ನಿಸಿರುವುದು ಸತ್ಯ ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ.

https://twitter.com/ANI/status/1763545909982277904

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read