HomeKarnatakaಬಿಜೆಪಿ 224, ಕಾಂಗ್ರೆಸ್ 223, ಜೆಡಿಎಸ್ 211 ಕ್ಷೇತ್ರದಲ್ಲಿ ಸ್ಪರ್ಧೆ: ಕಣದಲ್ಲಿ 3632 ಅಭ್ಯರ್ಥಿಗಳು

ಬಿಜೆಪಿ 224, ಕಾಂಗ್ರೆಸ್ 223, ಜೆಡಿಎಸ್ 211 ಕ್ಷೇತ್ರದಲ್ಲಿ ಸ್ಪರ್ಧೆ: ಕಣದಲ್ಲಿ 3632 ಅಭ್ಯರ್ಥಿಗಳು

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮುಕ್ತಾಯವಾಗಿದ್ದು, 3632 ಮಂದಿ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಇಂದು ನಾಮಪತ್ರ ಪರಿಶೀಲನೆ ಕಾರ್ಯ ನಡೆಯಲಿದೆ.

ಬಿಜೆಪಿ ಎಲ್ಲಾ ಇನ್ನೂ 224 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. 75 ಹೊಸ ಮುಖಗಳಿಗೆ ಅವಕಾಶ ನೀಡಲಾಗಿದೆ. 68 ಮಂದಿ ಲಿಂಗಾಯಿತರಿಗೆ ಬಿಜೆಪಿ ಟಿಕೆಟ್ ನೀಡಲಾಗಿದ್ದು, 134 ಪದವೀಧರರು, 37 ಸ್ನಾತಕೋತ್ತರ ಪದವೀಧರರು ಸೇರಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾಂಗ್ರೆಸ್ 223 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. 53 ಹೊಸ ಮುಖಗಳಿಗೆ ಅವಕಾಶ ನೀಡಲಾಗಿದೆ. 53 ಒಕ್ಕಲಿಗರಿಗೆ, 51 ಮಂದಿ ಲಿಂಗಾಯಿತರಿಗೆ, 14 ಮುಸ್ಲಿಮರಿಗೆ ಟಿಕೆಟ್ ನೀಡಲಾಗಿದೆ.

ಜೆಡಿಎಸ್ 211 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಇಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಏ. 24 ನಾಮಪತ್ರ ಹಿಂಪಡೆಯಲು ಕೊನೆ ದಿನವಾಗಿದೆ. ನಂತರ ಕಣದಲ್ಲಿ ಉಳಿಯುವ ಅಭ್ಯರ್ಥಿಗಳ ಸ್ಪಷ್ಟ ಚಿತ್ರಣ ಸಿಗಲಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular