HomeKarnatakaBIG NEWS: ಕಾಂಗ್ರೆಸ್ ಸರ್ಕಾರದಿಂದ ರಾಜ್ಯದಲ್ಲಿ ಆತ್ಮಹತ್ಯೆ ಭಾಗ್ಯ: ಗುತ್ತುಗೆದಾರನ ಸಾವಿಗೆ ನ್ಯಾಯ ಸಿಗುವವರೆಗೆ ರಾಜ್ಯಾದ್ಯಂತ...

BIG NEWS: ಕಾಂಗ್ರೆಸ್ ಸರ್ಕಾರದಿಂದ ರಾಜ್ಯದಲ್ಲಿ ಆತ್ಮಹತ್ಯೆ ಭಾಗ್ಯ: ಗುತ್ತುಗೆದಾರನ ಸಾವಿಗೆ ನ್ಯಾಯ ಸಿಗುವವರೆಗೆ ರಾಜ್ಯಾದ್ಯಂತ ಹೋರಾಟ: ಬಿಜೆಪಿ ಆಕ್ರೋಶ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಆತ್ಮಹತ್ಯೆ ಭಾಗ್ಯ ಜಾರಿಗೊಳಿಸಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಸರಣಿ ಆತ್ಮಹತ್ಯೆ ಪ್ರಕರಣಗಳು ದಾಖಲಾಗುತ್ತಿದೆ. ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಕಾಂಗ್ರೆಸ್ ಸರ್ಕಾರದ ಪ್ರಾಯೋಜಿತ ಹತ್ಯೆ ಎಂದು ರಾಜ್ಯ ಬಿಜೆಪಿ ವಾಗ್ದಾಳಿ ನಡೆಸಿದೆ.

ತನ್ನ ಸಾವಿಗೆ ಕಾರಣರಾದವರ ಹೆಸರನ್ನು ಬರೆದಿಟ್ಟರೂ, ಪ್ರಿಯಾಂಕ್‌ ಖರ್ಗೆ ಅವರ ಆಪ್ತ, ಕೊಲೆಗಾರ ರಾಜು ಕಪನೂರನ್ನು ಬಂಧಿಸದಿರುವುದು ಈ ಕೊಲೆಯಲ್ಲಿ ಕಾಂಗ್ರೆಸ್ ಸರ್ಕಾರ ಭಾಗಿಯಾಗಿದೆ ಎಂಬುದಕ್ಕೆ ಸಾಕ್ಷಿ ಎಂದು ಕಿಡಿಕಾರಿದೆ.

ಸಿಎಂ ಸಿದ್ದರಾಮಯ್ಯ ಅವರೇ, ಕೊಲೆಗಡುಕ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಕೂಡಲೇ ಸಂಪುಟದಿಂದ ವಜಾ ಮಾಡಿ, ಪ್ರಕರಣವನ್ನು ಸಿಬಿಐಗೆ ಒಪ್ಪಿಸಿ.
ಗುತ್ತಿಗೆದಾರ ಸಚಿನ್‌ ಆತ್ಮಹತ್ಯೆಗೆ ಕಾರಣರಾದ ಪ್ರಿಯಾಂಕ್‌ ಖರ್ಗೆ ಅವರ ರಾಜೀನಾಮೆಗೆ ಆಗ್ರಹಿಸಿ ಗುತ್ತಿಗೆದಾರ ಸಚಿನ್ ಅವರ ಸಾವಿಗೆ ನ್ಯಾಯ ಸಿಗುವವರೆಗೆ ರಾಜ್ಯಾದ್ಯಂತ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular