ಲೋಕಸಭೆ ಚುನಾವಣೆಗೆ ಬಿಜೆಪಿ ಕ್ಷೇತ್ರವಾರು ಕ್ಲಸ್ಟರ್ ರಚನೆ: 8 ಪ್ರಮುಖರ ನೇಮಕ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಉಸ್ತುವಾರಿ, ಸಂಚಾಲಕರನ್ನು ನೇಮಕ ಮಾಡಿದೆ. ಇದರ ಬೆನ್ನಲ್ಲೇ ಲೋಕಸಭೆಗೆ 8 ಕ್ಲಸ್ಟರ್ ಗಳನ್ನು ರಚಿಸಿ ಪ್ರಮುಖರನ್ನು ನೇಮಕ ಮಾಡಲಾಗಿದೆ.

ಮಾಜಿ ಸಚಿವ ಎಸ್.ಎ. ರಾಮದಾಸ್ ಅವರನ್ನು ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ ಲೋಕಸಭೆ ಕ್ಷೇತ್ರಗಳನ್ನೊಳಗೊಂಡ ಕ್ಲಸ್ಟರ್ ಪ್ರಮುಖರನ್ನಾಗಿ ನೇಮಕ ಮಾಡಲಾಗಿದೆ.

ದಕ್ಷಿಣ ಕನ್ನಡ, ಉಡುಪಿ –ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳಿಗೆ ಎಂ.ಬಿ. ಭಾನುಪ್ರಕಾಶ್ ಅವರನ್ನು ನೇಮಿಸಲಾಗಿದೆ.

ಶಾಸಕ ಮಹೇಶ ಟೆಂಗಿನಕಾಯಿ ಅವರನ್ನು ಬೆಳಗಾವಿ, ಚಿಕ್ಕೋಡಿ, ಬಾಗಲಕೋಟೆ, ವಿಜಯಪುರ ಕ್ಷೇತ್ರಗಳ ಕ್ಲಸ್ಟರ್ ಪ್ರಮುಖರನ್ನಾಗಿ ನೇಮಕ ಮಾಡಲಾಗಿದೆ.

ಬೀದರ್, ಕಲಬುರ್ಗಿ ಕ್ಷೇತ್ರಗಳಿಗೆ ರಾಜಕುಮಾರ ಪಾಟೀಲ್ ತೇಲ್ಕೂರ್ ಅವರನ್ನು ನೇಮಕ ಮಾಡಲಾಗಿದೆ. ರಾಯಚೂರು, ಕೊಪ್ಪಳ, ಬಳ್ಳಾರಿ ಲೋಕಸಭೆ ಕ್ಷೇತ್ರಗಳಿಗೆ ಚಂದ್ರಶೇಖರ ಪಾಟೀಲ್, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಕ್ಷೇತ್ರಗಳನ್ನು ಒಳಗೊಂಡ ಕ್ಲಸ್ಟರ್ ಗೆ ಎಸ್. ಮುನಿರಾಜು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಬೆಂಗಳೂರು ಕೇಂದ್ರ ಮತ್ತು ಬೆಂಗಳೂರು ಉತ್ತರ ಲೋಕಸಭೆ ಕ್ಷೇತ್ರಗಳಿಗೆ ಹೆಚ್.ಎಸ್. ಗೋಪಿನಾಥ್ ಅವರನ್ನು ಕ್ಲಸ್ಟರ್ ಪ್ರಮುಖರನ್ನಾಗಿ ನೇಮಕ ಮಾಡಲಾಗಿದೆ.

ಧಾರವಾಡ, ಹಾವೇರಿ, ದಾವಣಗೆರೆ, ಚಿತ್ರದುರ್ಗ ಲೋಕಸಭೆ ಕ್ಷೇತ್ರಗಳ ಕ್ಲಸ್ಟರ್ ಗೆ ಕೆ.ಎಸ್. ನವೀನ್ ಅವರನ್ನು ನೇಮಕ ಮಾಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read