ಬೆಂಗಳೂರು: ಇಂದು ಸಂಜೆ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದೆ. ಬಿಜೆಪಿ ರಾಜ್ಯ ಉಸ್ತುವಾರಿ ರಾಧಾಮೋಹನ್ ಅಗರ್ವಾಲ್ ನೇತೃತ್ವದಲ್ಲಿ ಈ ಸಭೆ ನಡೆಯಲಿದೆ.
ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಸಭೆ ನಡೆಯಲಿದೆ. ಸಭೆಯಲ್ಲಿ ಬಿಜೆಪಿ ನಾಯಕರ ರಾಜ್ಯ ಪ್ರವಾಸ, ಸರ್ಕಾರದ ವಿರುದ್ಧ ಹೋರಾಟ, ಸ್ಥಳೀಯ ಸಂಸ್ಥೆಗಳ ಚುನಾವಣೆ ಕುರಿತು ಚರ್ಚೆ ನಡೆಯಲಿದೆ.
ಕೋರ್ ಕಮಿಟಿ ಸಭೆ ಬಳಿಕ ಜಿಬಿಎ ಚುನಾವಣೆ ಪೂರ್ವ ಸಿದ್ಧತಾ ಸಭೆ ಕೂಡ ನಡೆಯಲಿದೆ. ಬೆಂಗಳೂರಿನ ಬಿಜೆಪಿ ಸಂಸದರು, ಶಾಸಕರು, ಎಂಎಲ್ ಸಿಗಳು ಭಾಗಿಯಾಗಲಿದ್ದಾರೆ.