BIG NEWS: ಬಿಜೆಪಿ ಕೋರ್ ಕಮಿಟಿ ಸಭೆ ಆರಂಭ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ ಆರಂಭವಾಗಿದೆ.

ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಕೋರ್ ಕಮಿಟಿ ಸಭೆ ಆರಂಭವಾಗಿದ್ದು, ಬಿ.ವೈ.ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕರ ಸ್ವೀಕರಿಸಿದ ಬಳಿಕ ನಡೆಯುತ್ತಿರುವ ಮೊದಲ ಸಭೆ ಇದಾಗಿದೆ.

ಸಭೆಯಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಬಸವರಾಜ್ ಬೊಮ್ಮಾಯಿ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಸಿ.ಟಿ.ರವಿ, ಬಿಜೆಪಿ ಪದಾಧಿಕರಿಗಳು ಭಾಗಿಯಾಗಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಂಸದ ನಳೀನ್ ಕುಮಾರ್ ಕಟೀಲ್ ಸಭೆಗೆ ಗೈರಾಗಿದ್ದಾರೆ.

ಸಭೆಯಲ್ಲಿ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ವಿಚಾರ, ಪಕ್ಷದ ವಿರುದ್ಧ ಮಾತನಾಡುವರಿಗೆ ಖಡಕ್ ಎಚ್ಚರಿಕೆ, ಲೋಕಸಭಾ ಚುನಾವಣೆ, ಪಕ್ಷ ಸಂಘಟನೆ ಸೇರಿದಂತೆ ಹಲವು ವಿಚಾರಗಳು ಚರ್ಚೆಗೆ ಬರಲಿವೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read