ಬೆಂಗಳೂರು: ವಿಪಕ್ಷ ಬಿಜೆಪಿ ವಿರುದ್ಧ ರಾಜ್ಯ ಕಾಂಗ್ರೆಸ್ ಸರ್ಕಾರ ಮಾನನಷ್ಟ ಮೊಕದ್ದಮೆ ಹೂಡಲು ನಿರ್ಧರಿಸಿದೆ.
ಸರ್ಕಾರದ ವಿರುದ್ಧ ಅಪಪ್ರಚಾರ, ಸುಳ್ಳು ಆರೋಪ ಮಾಡಿ ಜಾಹಿರಾತುಗಳನ್ನು ಪ್ರಕಟಿಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ಮಾನನಷ್ಟ ಕೇಸ್ ದಾಖಲಿಸಲು ಸರ್ಕಾರ ತೀರ್ಮಾನಿಸಿದೆ.
ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದ್ದು, ಬಿಜೆಪಿಯವರು ಕೆಟ್ಟದಾಗಿ ಸುಳ್ಳು ಆರೋಪ ಮಾಡಿ ಸರ್ಕಾರದ ವಿರುದ್ಧ ಜಹೀರಾತು ಪ್ರಕಟಿಸುತ್ತಿದ್ದಾರೆ. ಸರ್ಕಾರದ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಸ್ ದಾಖಲಿಸುವುದಾಗಿ ತಿಳಿಸಿದರು.
ನಾವು ಮಾಡಿದ ಕೆಲಸದ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ನಾವು ವಿಪಕ್ಷದಲ್ಲಿದ್ದಾಗ ಜಾಹೀರಾತು ನೀಡಿದ್ದೆವು. ಆದರೆ ಬಿಜೆಪಿ ವಿರುದ್ಧ ಸುಳ್ಳು ಆರೋಪ ಮಾಡಿ ಜಾಹಿರಾತು ನೀಡಿರಲಿಲ್ಲ. ಆದರೆ ಬಿಜೆಪಿಯವರು ಸುಳ್ಳು ಸುದ್ದಿ ಹಬ್ಬಿಸಿ ಜಾಹೀರಾತು ಪ್ರಕಟಿಸುತ್ತಿದ್ದಾರೆ. ಹಾಗಾಗಿ ಕೇಸ್ ದಾಖಲಿಸುವುದಾಗಿ ಹೇಳಿದರು. ಪ್ರಕರಣದ ಸತ್ಯಾಸತ್ಯತೆ ಬಗ್ಗೆ ನ್ಯಾಯಾಲಯ ತೀರ್ಮಾನ ಮಾಡಲಿದೆ ಎಂದು ಹೇಳಿದರು.