HomeKarnatakaBIG NEWS: ವಿಧಾನಸಭೆ ಚುನಾವಣೆಗೆ 175 ಅಭ್ಯರ್ಥಿಗಳ ಬಿಜೆಪಿ ಪಟ್ಟಿ ಇಂದು ಬಿಡುಗಡೆ ಸಾಧ್ಯತೆ

BIG NEWS: ವಿಧಾನಸಭೆ ಚುನಾವಣೆಗೆ 175 ಅಭ್ಯರ್ಥಿಗಳ ಬಿಜೆಪಿ ಪಟ್ಟಿ ಇಂದು ಬಿಡುಗಡೆ ಸಾಧ್ಯತೆ

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಅಂತಿಮಗೊಳಿಸಲು ತೀವ್ರ ಕಸರತ್ತು ನಡೆದಿದ್ದು, ಇಂದು ಅಧಿಕೃತವಾಗಿ 150 ರಿಂದ 175 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ.

ದೆಹಲಿಯಲ್ಲಿ ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹಾಗೂ ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಸೇರಿದಂತೆ ಹಲವು ನಾಯಕರು ಸಭೆ ನಡೆಸಿ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಚರ್ಚೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಭೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿಗೆ ಅನುಮೋದನೆ ನೀಡಲಾಗಿದೆ. ರಾಜ್ಯ ಬಿಜೆಪಿ ನಾಯಕರ ಜೊತೆಗೆ ದೆಹಲಿಯಲ್ಲಿ ಪಕ್ಷದ ವರಿಷ್ಠರು ಸಭೆ ನಡೆಸಿದ್ದಾರೆ. ಸಮೀಕ್ಷಾ ವರದಿಗಳು, ವಯಸ್ಸು ಸೇರಿ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಭಾನುವಾರ ಸಂಜೆ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಅಭ್ಯರ್ಥಿಗಳ ಪಟ್ಟಿಗೆ ಅಂತಿಮ ಅನುಮೋದನೆ ನೀಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular