ಬೆಳಗಾವಿ: ಬಿಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ವಿಧಾನಮಂಡಲ ಚಳಿಗಾಲದ ಅಧಿವೇಶನದ ಎರಡನೇ ದಿನವಾದ ಇಂದು ಕಾಂಗ್ರೆಸ್ ಸರ್ಕಾರಕ್ಕೆ ಪ್ರತಿಭಟನೆಗಳ ಬಿಸಿ ತಟ್ಟಿದೆ. ರೈತರೊಂದಿಗೆ ಬಿಜೆಪಿ ನಾಯಕರು ಬೃಹತ್ ಪ್ರತಿಭಟನಾ ರ್ಯಾಲಿ ಆರಂಭಿಸಿದ್ದು, ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ.
ಬೆಳಗಾವಿಯ ಮಾಲಿನಿ ಸಿಟಿ ಮೈದನಾದಲ್ಲಿ ರೈತರೊಂದಿಗೆ ಬಿಜೆಪಿ ನಾಯಕರು ಪ್ರತಿಭಟನಾ ಸಭೆ ನಡೆಸಿದ್ದು, ಸಭೆ ಬಳಿಕ ಮಾಲಿನಿಸಿಟಿ ಮೈದಾನದಿಂದ ಪಾದಯಾತ್ರೆ ಮೂಲಕವಾಗಿ ಸುವರ್ಣಸೌಧದತ್ತ ಪಾದಯಾತ್ರೆ ಕೈಗೊಂಡಿದ್ದಾರೆ.
ಪ್ರತಿಭಟನಾ ಮೆರವಣಿಗೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಆರ್.ಅಶೋಕ್, ಸಿ.ಟಿ.ರವಿ ಸೇರಿದಂತೆ ಹಲವು ಬಿಜೆಪಿ ನಾಯಕರು, ರೈತ ಮುಖಂಡರು ಬಾರುಕೊಲು ಹಿಡಿದು ಸಾಗಿದ್ದು, ರೈತರನ್ನು ನಿರ್ಲಕ್ಷ್ಯ ಮಾಡುತ್ತಿರುವ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದ್ದಾರೆ. ಸುವರಣಸೌಧದತ್ತ ಮುನ್ನುಗ್ಗುತ್ತಿದ್ದ ಪ್ರತಿಭಟನಾಕರರನ್ನು ಪೊಲೀಸರು ತಡೆದಿದ್ದಾರೆ.
