HomeIndiaBREAKING: ಕೇರಳದ ವಯನಾಡು ಕ್ಷೇತ್ರದಲ್ಲಿ ಪ್ರಿಯಾಂಕಾ ಗಾಂಧಿ ವಿರುದ್ಧ ನವ್ಯಾ ಹರಿದಾಸ್ ಬಿಜೆಪಿ ಅಭ್ಯರ್ಥಿ

BREAKING: ಕೇರಳದ ವಯನಾಡು ಕ್ಷೇತ್ರದಲ್ಲಿ ಪ್ರಿಯಾಂಕಾ ಗಾಂಧಿ ವಿರುದ್ಧ ನವ್ಯಾ ಹರಿದಾಸ್ ಬಿಜೆಪಿ ಅಭ್ಯರ್ಥಿ

ವಯನಾಡ್ ಲೋಕಸಭಾ ಉಪಚುನಾವಣೆಗೆ ಪ್ರಿಯಾಂಕಾ ಗಾಂಧಿ ವಿರುದ್ಧ ಬಿಜೆಪಿ ನವ್ಯಾ ಹರಿದಾಸ್ ಅವರನ್ನು ಕಣಕ್ಕಿಳಿಸಿದೆ.

ಭಾರತೀಯ ಚುನಾವಣಾ ಆಯೋಗ(ಇಸಿಐ) ಮಂಗಳವಾರ ಉಪ ಚುನಾವಣೆಯ ದಿನಾಂಕವನ್ನು ಪ್ರಕಟಿಸಿದೆ. ನವೆಂಬರ್ 13 ರಂದು ಮತದಾನ ನಡೆಯಲಿದ್ದು, ನವೆಂಬರ್ 23 ರಂದು ಫಲಿತಾಂಶ ಪ್ರಕಟವಾಗಲಿದೆ.

ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿರುವ ರಾಹುಲ್ ಗಾಂಧಿ ಅವರು ಸಾರ್ವತ್ರಿಕ ಲೋಕಸಭೆ ಚುನಾವನೆಯಲ್ಲಿ ಎರಡೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ ನಂತರ ಉತ್ತರ ಪ್ರದೇಶದ ರಾಯ್ ಬರೇಲಿ ಕ್ಷೇತ್ರವನ್ನು ಉಳಿಸಿಕೊಂದು ವಯನಾಡು ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಹುಲ್ ಸ್ಥಾನವನ್ನು ಖಾಲಿ ಮಾಡಿದ ನಂತರ, ಕಾಂಗ್ರೆಸ್ ಪಕ್ಷವು ಪ್ರಿಯಾಂಕಾ ಗಾಂಧಿಯನ್ನು ವಯನಾಡ್‌ನಿಂದ ಅವರ ಚೊಚ್ಚಲ ಚುನಾವಣೆಯಲ್ಲಿ ಕಣಕ್ಕಿಳಿಸಲು ನಿರ್ಧರಿಸಿತು.

ಪ್ರಿಯಾಂಕಾ ಅವರ ಉಮೇದುವಾರಿಕೆಯನ್ನು ಘೋಷಿಸಿದಾಗಿನಿಂದ, ಕಾಂಗ್ರೆಸ್ ತನ್ನ ಪ್ರಚಾರ ಜೋರಾಗಿದ್ದು, ರಾಹುಲ್ ಅವರ ಹಿಂದಿನ ಗೆಲುವಿನ 3.6 ಲಕ್ಷ ಮತಗಳ ಅಂತರವನ್ನು ಸುಧಾರಿಸುವ ಗುರಿಯನ್ನು ಹೊಂದಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular