2011ರಲ್ಲಿ ‘ಕರ್ನಾಟಕ ಬಂದ್’ ಗೆ ಕರೆ ನೀಡಿದ್ದು ಬಿಜೆಪಿಗೆ ಮರೆತುಹೋಗಿದೆ : ಸಿಎಂ ಸಿದ್ದರಾಮಯ್ಯ..!

ಬೆಂಗಳೂರು : ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು 2011ರ ಆಗಸ್ಟ್ ನಾಲ್ಕರಂದು. ಅದು ನ್ಯಾ.ಸಂತೋಷ್ ಹೆಗ್ಡೆ ಅವರ ನೇತೃತ್ವದ ಲೋಕಾಯುಕ್ತವು ಅಕ್ರಮ ಗಣಿಗಾರಿಕೆಯ ತನಿಖಾ ವರದಿಯನ್ನು ರಾಜ್ಯ ಸರ್ಕಾರ ಮತ್ತು ರಾಜ್ಯಪಾಲರಿಗೆ ಸಲ್ಲಿಸಿದ ನಂತರ. ಅಕ್ರಮ ಗಣಿಗಾರಿಕೆಯಿಂದಾಗಿ ರಾಜ್ಯದ ಬೊಕ್ಕಸಕ್ಕೆ 16,500 ಕೋಟಿ ರೂಪಾಯಿಯಷ್ಟು ನಷ್ಟವಾಗಿದೆ ಎಂದು ಲೋಕಾಯುಕ್ತ ತನಿಖಾ ವರದಿಯಲ್ಲಿ ಹೇಳಿತ್ತು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿದ ಸಿಎಂ ಸಿದ್ದರಾಮಯ್ಯ  @RAshokaBJPಅವರೇ, ಹಳೆಯದ್ದನ್ನೆಲ್ಲವನ್ನೂ ನೆನಪಿಸಿಕೊಳ್ಳಿ, ಆಗ ನೀವೆಲ್ಲರೂ ಸೇರಿ @BSYBJPವಿರುದ್ಧವೇ ಏನೆಲ್ಲ ಕುತಂತ್ರ ಮಾಡಿದ್ದೀರಿ ಎನ್ನುವುದೂ ನೆನಪಾಗಬಹುದು. ರಾಜ್ಯಪಾಲ ಹಂಸರಾಜ ಭಾರದ್ವಾಜ ಅವರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದ ರಾಚೇನಹಳ್ಳಿ ಡಿನೋಟಿಫಿಕೇಷನ್ ಹಗರಣದ ತನಿಖೆ ನಡೆಸಿದ್ದ ನ್ಯಾ.ಸಂತೋಷ್ ಹೆಗ್ಡೆ ನೇತೃತ್ವದ ಲೋಕಾಯುಕ್ತವೇ ಆರೋಪಗಳೆಲ್ಲವನ್ನು ಸಾಬೀತುಪಡಿಸಿ ಆರೋಪ ಪಟ್ಟಿ ಸಲ್ಲಿಸಿದ್ದರು. ಈ ಮೂಲಕ ರಾಜ್ಯಪಾಲರ ಪ್ರಾಸಿಕ್ಯೂಷನ್ ನಿರ್ಧಾರ ನ್ಯಾಯಯುತವಾಗಿತ್ತು ಎಂದು ಲೋಕಾಯುಕ್ತ ಸಂತೋಷ್ ಹೆಗ್ಡೆ ಅವರೇ ದೃಡೀಕರಿಸಿದ್ದರಲ್ಲವೇ?ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ರಾಜ್ಯಪಾಲ ಹಂಸರಾಜ ಭಾರದ್ವಾಜ ಅವರು ಒಂದಲ್ಲ ಎರಡಲ್ಲ ಹದಿನೈದು ಡಿನೋಟಿಫಿಕೇಷನ್ ಹಗರಣಗಳ ತನಿಖೆಗೆ ಅನುಮತಿ ನೀಡಿದ್ದರು. ಹೆಚ್ಚಿನ ಮಾಹಿತಿಗೆ ನ್ಯಾ.ಸಂತೋಷ್ ಹೆಗ್ಡೆ ಅವರು ನೀಡಿದ್ದ ಅಕ್ರಮ ಗಣಿಗಾರಿಕೆಯ ತನಿಖಾ ವರದಿಯನ್ನು ತೆಗೆದು ಓದಿಕೊಳ್ಳಿ.ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

https://twitter.com/siddaramaiah/status/1825427716717289883

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read