HomeKarnatakaBIG NEWS : ಗ್ಯಾರಂಟಿ ಯೋಜನೆಗಳಲ್ಲಿ ಗೋಲ್ ಮಾಲ್ ಆರೋಪ ; ಶ್ವೇತಪತ್ರ...

BIG NEWS : ಗ್ಯಾರಂಟಿ ಯೋಜನೆಗಳಲ್ಲಿ ಗೋಲ್ ಮಾಲ್ ಆರೋಪ ; ಶ್ವೇತಪತ್ರ ಬಿಡುಗಡೆಗೆ ಆರ್.ಅಶೋಕ್ ಆಗ್ರಹ

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಹಾಗೂ ವೆಚ್ಚದ ಕುರಿತು ನೀಡಿರುವ ಅಂಕಿ-ಅಂಶಗಳ ಬಗ್ಗೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಒಂದೇ ಯೋಜನೆಗೆ ಸರ್ಕಾರದ ವಿವಿಧ ಅಧಿಕೃತ ಮೂಲಗಳಲ್ಲಿ ಬೇರೆ ಬೇರೆ ಅಂಕಿ-ಅಂಶಗಳು ಪ್ರಕಟವಾಗಿವೆ ಎಂದು ಆರೋಪಿಸಿರುವ ಆರ್.ಅಶೋಕ್  ಶ್ವೇತಪತ್ರ ಹೊರಡಿಸುವ ಮೂಲಕ  ಈ ಬಗ್ಗೆ ರಾಜ್ಯ ಸರ್ಕಾರ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಬಿಜೆಪಿ ಆರೋಪದ ಪ್ರಕಾರ, ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಸಂಖ್ಯೆ ಕುರಿತು ಸರ್ಕಾರದ ಅಧಿಕೃತ ಪ್ರಕಟಣೆಗಳು ಹಾಗೂ ಗ್ಯಾರಂಟಿ ಅನುಷ್ಠಾನ ಸಮಿತಿಯ ಮಾಹಿತಿಯಲ್ಲಿ 1.24 ಕೋಟಿ ಫಲಾನುಭವಿಗಳಿದ್ದಾರೆ ಎಂದು ಉಲ್ಲೇಖಿಸಲಾಗಿದೆ. ಆದರೆ, ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಅವರು 1.28 ಕೋಟಿ ಫಲಾನುಭವಿಗಳಿದ್ದಾರೆ ಎಂದು ಹೇಳಿದ್ದಾರೆ. ಈ ವ್ಯತ್ಯಾಸದ ಬಗ್ಗೆ ಆರ್.ಅಶೋಕ್  ಪ್ರಶ್ನೆ ಎತ್ತಿದ್ದಾರೆ.

 ಆರ್.ಅಶೋಕ್ ಆರೋಪಗಳೇನು..?

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಆರ್ .ಅಶೋಕ್ ‘ಸ್ವಾತಂತ್ರ್ಯ ದಿನಾಚರಣೆ ಭಾಷಣದಲ್ಲೂ ಅಪ್ಪಟ ಸುಳ್ಳು! ಏಳು ಕೋಟಿ ಕನ್ನಡಿಗರಿಗೆ ಸಿಎಂ @DKShivakumar

ಮಾಡಿದ ಘೋರ ಅಪಮಾನ! ಸ್ವಾತಂತ್ರ್ಯ ದಿನಾಚರಣೆಯಂತಹ ಪವಿತ್ರ ವೇದಿಕೆಯಲ್ಲೂ ರಾಜ್ಯದ ಜನತೆಗೆ ತಪ್ಪು ಮಾಹಿತಿ ನೀಡಿ, ಸುಳ್ಳು ಲೆಕ್ಕಗಳನ್ನು ನೀಡುವ ಮೂಲಕ ಡಿ.ಕೆ. ಶಿವಕುಮಾರ್ ಅವರು 7 ಕೋಟಿ ಕನ್ನಡಿಗರಿಗೆ ಘೋರ ಅಪಮಾನ ಮಾಡಿದ್ದಾರೆ. ಸಿಎಂ

@DKShivakumar

ಅವರೇ, ನಿಮ್ಮದೇ ಸರ್ಕಾರದ ಅಧಿಕೃತ ಜಾಹೀರಾತುಗಳು, ಟ್ವೀಟ್‌ಗಳು ಮತ್ತು ಗ್ಯಾರಂಟಿ ಅನುಷ್ಠಾನ ಸಮಿತಿಗಳ ಪತ್ರಿಕಾ ಪ್ರಕಟಣೆಗಳ ನಡುವೆಯೇ ತಾಳೆ ಆಗದ ಅಂಕಿ-ಅಂಶಗಳ ಮಹಾಪೂರವೇ ಇದೆ. ಇದು ಕೇವಲ ಗೊಂದಲವಲ್ಲ, ಗ್ಯಾರಂಟಿ ಯೋಜನೆಯ ಹೆಸರಿನಲ್ಲಿ ನಡೆಯುತ್ತಿರುವ ಬೃಹತ್ ಬ್ರಹ್ಮಾಂಡ ಭ್ರಷ್ಟಾಚಾರಕ್ಕೆ ತಾವೇ ಕೊಟ್ಟಿರುವ “ಸಾಕ್ಷಿ ಗುಡ್ಡೆ”. ಯಾವುದು ನಿಜ? ಯಾರದ್ದು ಸುಳ್ಳು? ಸಿಎಂ ಡಿಕೆಶಿ ಅವರೇ ಉತ್ತರಿಸಿ: ಗೃಹಲಕ್ಷ್ಮಿ ಯೋಜನೆ ನಿಮ್ಮದೇ ಸರ್ಕಾರ ಮತ್ತು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಹೆಚ್.ಎಂ. ರೇವಣ್ಣ ಹಾಗೂ ಉಪಾಧ್ಯಕ್ಷ ದಿನೇಶ್ ಗೂಳಿಗೌಡ ಅವರು ನೀಡಿರುವ ಅಧಿಕೃತ ಪ್ರಕಟಣೆಯಲ್ಲಿ ಫಲಾನುಭವಿಗಳ ಸಂಖ್ಯೆ 1.24 ಕೋಟಿ (1,24,48,000) ಎಂದಿದೆ. ಕಾಂಗ್ರೆಸ್ ಸರ್ಕಾರ 3 ವರ್ಷ ಪೂರೈಸಿದ ಸಂದರ್ಭದಲ್ಲಿ ಮೇ 25, 2026ರಂದು ಮುಖ್ಯಮಂತ್ರಿಗಳ ಕಚೇರಿಯ ಅಧಿಕೃತ X ಖಾತೆಯ ಪೋಸ್ಟ್ ಒಂದರಲ್ಲಿಯೂ ಸಹ ಫಲಾನುಭವಿಗಳ ಸಂಖ್ಯೆ 1.24 ಕೋಟಿ ಎಂದು ಹೇಳಲಾಗಿದೆ. ಆದರೆ, ಇಂದಿನ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಸಿಎಂ ಡಿ.ಕೆ.ಶಿವಕುಮಾರ್ ಅವರು 1.28 ಕೋಟಿ ಎಂದು ಹೇಳುತ್ತಾರೆ! ಈ 4 ಲಕ್ಷ ಹೆಚ್ಚುವರಿ ಫಲಾನುಭವಿಗಳು ಯಾರು? ಯಾರ ಖಾತೆಗೆ ಹಣ ಹೋಗುತ್ತಿದೆ? ಇನ್ನು ಶಕ್ತಿ ಯೋಜನೆಗೆ ಬರೋಣ.

ಶಕ್ತಿ ಯೋಜನೆ: ಶಕ್ತಿ ಯೋಜನೆ ಮೂರು ವರ್ಷ ಪೂರೈಸಿದ ಸಂದರ್ಭದಲ್ಲಿ ಜೂನ್ 11, 2026 ರಂದು ಮುಖ್ಯಮಂತ್ರಿಗಳ ಕಚೇರಿಯ ಅಧಿಕೃತ X ಖಾತೆಯಲ್ಲಿ ಶಕ್ತಿ ಯೋಜನೆಗೆ ವೆಚ್ಚ ₹19,771 ಕೋಟಿ ಎನ್ನಲಾಗಿದೆ. ಕಾಂಗ್ರೆಸ್ ಸರ್ಕಾರ ಮೂರು ವರ್ಷ ಪೂರೈಸಿದ ಸಂದರ್ಭದಲ್ಲಿ ಅಂದರೆ ಮೇ 25, 2026ರಂದು ಮುಖ್ಯಮಂತ್ರಿಗಳ ಕಚೇರಿಯ ಅಧಿಕೃತ X ಖಾತೆಯ ಪೋಸ್ಟ್ ಒಂದರಲ್ಲಿ ಶಕ್ತಿ ಯೋಜನೆಯ ವೆಚ್ಚ ₹18,943 ಕೋಟಿ ಎನ್ನಲಾಗಿದೆ. ಆದರೆ, ಸಿಎಂ ಡಿ.ಕೆ. ಶಿವಕುಮಾರ್ ಅವರ ಇಂದಿನ ಸ್ವಾತಂತ್ರ್ಯ ದಿನಾಚರಣೆ ಭಾಷಣದಲ್ಲಿ ಶಕ್ತಿ ಯೋಜನೆಯ ವೆಚ್ಚ ₹14,875 ಕೋಟಿ ಎಂದು ಓದುತ್ತಾರೆ! ಒಂದೇ ಯೋಜನೆಗೆ ಮೂರು ಬೇರೆ ಬೇರೆ ದಿನಗಳಲ್ಲಿ ಸಾವಿರಾರು ಕೋಟಿ ರೂಪಾಯಿಗಳ ವ್ಯತ್ಯಾಸ ಹೇಗೆ ಸಾಧ್ಯ? ಈ ಕೋಟ್ಯಂತರ ರೂಪಾಯಿ ಹಣ ಎಲ್ಲಿಗೆ ಹೋಯಿತು? ಇಷ್ಟಕ್ಕೂ ಇಲ್ಲಿ ಯಾರು ಹೇಳುತ್ತಿರುವುದು ಸತ್ಯ? ಯಾರು ಹೇಳುತ್ತಿರುವುದು ಸುಳ್ಳು? ಮಾಜಿ ಸಿಎಂ

@siddaramaiahಅವರು ಹೇಳುತ್ತಿರುವುದು ಸುಳ್ಳಾ? ಹಾಲಿ ಸಿಎಂ

@DKShivakumar

ಅವರು ಹೇಳುತ್ತಿರುವುದು ಸುಳ್ಳಾ? ಅಥವಾ ಗ್ಯಾರೆಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಹೇಳುತ್ತಿರುವುದು ಸುಳ್ಳಾ? ಸಾರ್ವಜನಿಕರ ತೆರಿಗೆ ಹಣದಲ್ಲಿ ‘ಗ್ಯಾರಂಟಿ ಅನುಷ್ಠಾನ ಸಮಿತಿ’ ಎಂದು ಅಧ್ಯಕ್ಷರು, ಉಪಾಧ್ಯಕ್ಷರನ್ನು ನೇಮಿಸಿ, ಅವರಿಗೆ ಕಾರು, ಭತ್ಯೆ, ಆಡಂಬರದ ಸೌಲಭ್ಯಗಳನ್ನು ನೀಡಿದ್ದೀರಿ. ಸರ್ಕಾರಿ ಇಲಾಖೆಗಳು ಒಂದು ಲೆಕ್ಕ ನೀಡಿದರೆ, ಈ ಸಮಿತಿ ಇನ್ನೊಂದು ಲೆಕ್ಕ ಕೊಡುತ್ತದೆ, ಸಚಿವರು ಮತ್ತೊಂದು ಸುಳ್ಳು ಹೇಳುತ್ತಾರೆ! ಈ ಗೊಂದಲ ಸೃಷ್ಟಿಸಲೆಂದೇ ಅನುಷ್ಠಾನ ಸಮಿತಿಗಳನ್ನು ಮಾಡಿದ್ದೀರಾ? ಮುಖ್ಯಮಂತ್ರಿಗಳಿಗೆ ನಮ್ಮ ನೇರ ಸವಾಲು ಮತ್ತು ಆಗ್ರಹ: ಕನ್ನಡಿಗರ ಕಣ್ಣಿಗೆ ಮಣ್ಣೆರಚುವ ಕೆಲಸವನ್ನು ತಕ್ಷಣವೇ ನಿಲ್ಲಿಸಿ. ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಸುಳ್ಳು ಲೆಕ್ಕ ನೀಡಿ ರಾಜ್ಯದ ಜನತೆಗೆ ಅಪಮಾನ ಮಾಡಿದ್ದಕ್ಕಾಗಿ ಡಿ.ಕೆ. ಶಿವಕುಮಾರ್ ಅವರು ಕನ್ನಡಿಗರ ಕ್ಷಮೆ ಕೇಳಬೇಕು. ಈ ಭ್ರಷ್ಟ ಕಾಂಗ್ರೆಸ್ ಸರ್ಕಾರಕ್ಕೆ ಕಿಂಚಿತ್ತಾದರೂ ನಾಚಿಕೆ, ಮಾನ, ಮರ್ಯಾದೆ ಇದ್ದರೆ ಗ್ಯಾರಂಟಿ ಯೋಜನೆಗಳ ಪ್ರತಿಯೊಂದು ಪೈಸೆ ವೆಚ್ಚ ಹಾಗೂ ಫಲಾನುಭವಿಗಳ ನಿಜವಾದ ವಿವರಗಳನ್ನು ಒಳಗೊಂಡ “ಶ್ವೇತಪತ್ರ”ವನ್ನು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

 

https://twitter.com/RAshokaBJP/status/2088622291626410271

https://x.com/RAshokaBJP/status/2088618417280667964

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular