ವಿರೋಧ ಪಕ್ಷವಾಗಿಯೂ ಜವಾಬ್ದಾರಿಯುತವಾಗಿ ನಡೆದುಕೊಳ್ಳುವಲ್ಲಿ ಬಿಜೆಪಿ ಸೋತಿದೆ : ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು : ರಾಜ್ಯ ಬಿಜೆಪಿ ವಿರೋಧ ಪಕ್ಷದ ಆಯ್ಕೆ ಕಗ್ಗಂಟು ಮುಂದುವರೆದಿದ್ದು, ಈ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟರ್ ನಲ್ಲಿ ಬಿಜೆಪಿ ವಿರುದ್ಧ ವ್ಯಂಗ್ಯವಾಡಿದ್ದಾರೆ.

ಟ್ವೀಟ್ ಮಾಡಿರುವ ಸಚಿವ ಪ್ರಿಯಾಂಕ್ ಖರ್ಗೆ, ವಿರೋಧ ಪಕ್ಷದ ನಾಯಕನಿಲ್ಲದೆ ರಾಜ್ಯಪಾಲರ ಭಾಷಣ ಆಯಿತು. ಬಜೆಟ್ ಮಂಡನೆಯಾಯ್ತು, ಸದನ ಶುರುವಾಗಿ ಒಂದು ವಾರಕ್ಕೂ ಹೆಚ್ಚು ದಿನಗಳಾದವು. ಕರ್ನಾಟಕದ ವಿಧಾನಸಭೆಯ ಭವ್ಯ ಪರಂಪರೆಗೆ ಮೊದಲ ಬಾರಿ ಇಂತಹದ್ದೊಂದು ಕಪ್ಪು ಚುಕ್ಕೆ ಅಂಟಿದೆ. ಆಡಳಿತ ಪಕ್ಷವಾಗಿ ಮಾತ್ರವಲ್ಲ, ವಿರೋಧ ಪಕ್ಷವಾಗಿಯೂ ಜವಾಬ್ದಾರಿಯುತವಾಗಿ ನಡೆದುಕೊಳ್ಳುವಲ್ಲಿ ಬಿಜೆಪಿ ಸೋತಿದೆ ಎಂದು ಹೇಳಿದ್ದಾರೆ.

ವಿಪಕ್ಷ ನಾಯಕನನ್ನು ನೇಮಿಸದೆ ಪ್ರಜಾಪ್ರಭುತ್ವ ವ್ಯವಸ್ಥೆಗೆ, ಕರ್ನಾಟಕದ ಜನತೆಗೆ, ಸದನದ ಪಾವಿತ್ರ್ಯತೆಗೆ ಅವಮಾನಕರವಾಗಿ ನಡೆದುಕೊಂಡು ರಾಜಕೀಯ ವ್ಯವಸ್ಥೆಯ ಮೇಲೆ ಜನರಲ್ಲಿ ಅಪನಂಬಿಕೆ ಮೂಡಿಸುತ್ತಿದೆ ಬಿಜೆಪಿ ಎಂದು ವಾಗ್ದಾಳಿ ನಡೆಸಿದ್ದಾರೆ.

https://twitter.com/PriyankKharge/status/1678253107954741249

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read