HomeLatest Newsಬಿಜೆಪಿ ರಾಜ್ಯಪಾಲರ ಮೂಲಕವೇ ಕನ್ನಡಿಗರನ್ನು ಅವಮಾನಿಸಿದೆ : ಸಚಿವ ಪ್ರಿಯಾಂಕ್ ಖರ್ಗೆ ಕಿಡಿ

ಬಿಜೆಪಿ ರಾಜ್ಯಪಾಲರ ಮೂಲಕವೇ ಕನ್ನಡಿಗರನ್ನು ಅವಮಾನಿಸಿದೆ : ಸಚಿವ ಪ್ರಿಯಾಂಕ್ ಖರ್ಗೆ ಕಿಡಿ

ಬೆಂಗಳೂರು :  ವಿಧಾನಸೌಧದಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಬೇಕಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಒಂದೆರಡು ಮಾತಲ್ಲಿ ಶುಭ ಕೋರಿ ವಾಪಸ್ ಹೋಗಿದ್ದಾರೆ. ಈ ವಿಚಾರ ಕಾಂಗ್ರೆಸ್ ನಾಯಕರನ್ನು ಕೆರಳಿಸಿದ್ದು, ರಾಜ್ಯಪಾಲರನ್ನು ಅಡ್ಡಗಟ್ಟಿ ಭಾಷಣ ಮಾಡಿ ಮುಗಿಸಿ ಹೋಗುವಂತೆ ಆಗ್ರಹಿಸಿದ್ದಾರೆ. ಈ ವಿಚಾರ ರಾಜ್ಯ ರಾಜಕಾರಣದಲ್ಲಿ ಪರ-ವಿರೋಧ ಚರ್ಚೆಗೆ ಕಾರಣವಾಗಿದೆ.

ಸಚಿವ ಪ್ರಿಯಾಂಕ್ ಖರ್ಗೆ ಕಿಡಿ

 ಬಿಜೆಪಿ ಕನ್ನಡಿಗರನ್ನು ಅವಮಾನಿಸುವ ಪ್ರಕ್ರಿಯೆ ಮುಂದುವರೆದಿದೆ.ಸಾಂಸ್ಕೃತಿಕವಾಗಿ, ಆರ್ಥಿಕವಾಗಿ ಮತ್ತು ಆಡಳಿತಾತ್ಮಕವಾಗಿ ಕನ್ನಡಿಗರನ್ನು ಮತ್ತು ಕರ್ನಾಟಕವನ್ನು ಕಡೆಗಣಿಸಿ, ಶೋಷಿಸಿದ್ದ ಬಿಜೆಪಿ ಈಗ ಮತ್ತೊಂದು ಹೆಜ್ಜೆ ಮುಂದೆ ಹೋಗಿ ರಾಜ್ಯಪಾಲರ ಮೂಲಕವೇ ಕನ್ನಡಿಗರನ್ನು ಅವಮಾನಿಸಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಷ್ಟ್ರಗೀತೆ ನುಡಿಸುವವರೆಗೂ ಕಾಯದೆ ಎದ್ದು ಹೊರಟ ರಾಜ್ಯಪಾಲರು ಶಿಷ್ಟಾಚಾರವನ್ನು ಬದಿಗೊತ್ತಿ ರಾಷ್ಟ್ರಗೀತೆಗೂ ಅವಮಾನಿಸಿದ್ದಾರೆ. ಈ ಮೂಲಕ ಬಿಜೆಪಿ ರಾಷ್ಟ್ರ ಗೀತೆಯ ವಿರೋಧಿ, ಸಂವಿಧಾನ ವಿರೋಧಿ, ಕನ್ನಡಿಗರ ವಿರೋಧಿ ಎನ್ನುವುದು ಜಗಜ್ಜಾಹೀರಾಗಿದೆ.

ಕನ್ನಡಿಗರನ್ನು ಉದ್ದೇಶಿಸಿ ಪೂರ್ಣ ಭಾಷಣ ಮಾಡದಷ್ಟು ತೀವ್ರ ಅಸಹನೆಯನ್ನು ತೋರಿರುವ ರಾಜ್ಯಪಾಲರು ಬಿಜೆಪಿಯ ದರ್ಪ, ದಾರ್ಷ್ಟ್ಯದ ವಕ್ತಾರರಾಗಿ ನಿರೂಪಿಸಿದ್ದಾರೆ.

ಅಸಡ್ಡೆಯಿಂದ ಕೂಡಿದ ನಾಲ್ಕು ಸಾಲಿನ ಮಾತು, ಸರ್ಕಾರದ ಭಾಷಣದ ತಿರಸ್ಕಾರವು ಸಂವಿಧಾನದ ಆಶಯಗಳ ಉಲ್ಲಂಘನೆ ಮಾತ್ರವಲ್ಲ, ಕನ್ನಡಿಗರಿಗೆ ಎಸಗಿದ ಘೋರ ಅವಮಾನ.

ರಾಜ್ಯಪಾಲರ ಮೂಲಕ ಒಕ್ಕೂಟ ವ್ಯವಸ್ಥೆಯ ಮೌಲ್ಯಗಳನ್ನು ನೆಲಕ್ಕೆ ಹಾಕಿ ಹೊಸಕುತ್ತಿರುವ ಬಿಜೆಪಿಗೆ ಕನ್ನಡಿಗರು ಪಾಠ ಕಲಿಸುವುದು ನಿಶ್ಚಿತ ಎಂದು ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.

ಬಿ.ವೈ ವಿಜಯೇಂದ್ರ ಹೇಳಿದ್ದೇನು..?

ವಿಧಾನಮಂಡಲದ ಜಂಟಿ ಸದನವನ್ನುದ್ದೇಶಿಸಿ ರಾಜ್ಯಪಾಲರು ಮಾತನಾಡಿದ್ದಾರೆ. ಸದನದ ಒಳಗೆ ರಾಜ್ಯಪಾಲರಿಗೆ ಆಡಳಿತ ಪಕ್ಷದ ಸದಸ್ಯರು ಅಗೌರವ ತೋರಿದ್ದು ಖಂಡನೀಯ. ಸಿದ್ದರಾಮಯ್ಯ ಸರ್ಕಾರ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡಿದೆ ಎಂದಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular