ಬೆಂಗಳೂರು: ಕರ್ನಾಟಕ ಉದ್ಯಾನವನ ಸಂರಕ್ಷಣೆ ತಿದ್ದುಪಡಿ ವಿಧೇಯಕವನ್ನು ರಾಜ್ಯ ಸರ್ಕಾರ ಹಿಂಪಡೆದ ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯಿಸಿದ್ದು, ಬಿಜೆಪಿ ನಡೆಸಿದ ಹೋರಾಟಕ್ಕೆ ಸರ್ಕಾರ ಮಣಿದು ಪಾರ್ಕ್ ಮಸೂದೆಯನ್ನು ವಾಪಸ್ ಪಡೆದಿದೆ ಎಂದು ಟಾಂಗ್ ನೀಡಿದ್ದಾರೆ.
ರಾಯಚೂರಿನ ಸಿಂಧನೂರಿನಲ್ಲಿ ನಡೆಯುತ್ತಿರುವ ಬಳ್ಳಾರಿ ಚಲೋ ಪಾದಯಾತ್ರೆಯಲ್ಲಿ ಮಾತನಾಡಿದ ವಿಜಯೇಂದ್ರ., ಈ ವಿಧೇಯಕಕಕ್ಕೆ ಯಾವ ಮೂರ್ಖಸಲಹೆ ಕೊಟ್ಟಿದ್ದಾರೋ ಗೊತ್ತಿಲ್ಲ. ಬಿಜೆಪಿ ಹೋರಾಟಕ್ಕೆ ಸರ್ಕಾರ ಬೆದರಿದೆ. ಇದೀಗ ಯೂಟರ್ನ್ ಹೊಡೆದು ಮಸೂದೆ ವಾಪಸ್ ಪಡೆಯುವ ನಿರ್ಧಾರ ಕೈಗೊಂಡಿದೆ ಎಂದರು.
ಇನ್ನು ರೈತರ ಬೇಡಿಕೆಗಳ ಕುರಿತು ಸರ್ಕಾರದ ಗಮನ ಸೆಳೆದಿದ್ದೇವೆ. ರಾಜ್ಯದಲ್ಲಿ ಬರಗಾಲದ ಪರಿಸ್ಥಿತಿ ನಿರ್ಮಾಣವಾಗಿರುವ ಸಂದರ್ಭದಲ್ಲಿ ಸರ್ಕಾರ ರೈತರ ನೆರವಿಗೆ ಧಾವಿಸಬೇಕು. ರೈತರ ಸಂಕಷ್ಟವನ್ನು ಗಂಭೀರವಾಗಿ ಪರಿಗಣಿಸಿ ಅಗತ್ಯ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ವಿಶೇಷ ಅಧಿವೇಶನ ಕರೆಯಲು ಸರ್ಕಾರ ನಿರ್ಧರಿಸಿರುವುದನ್ನು ಬಿಜೆಪಿ ಸ್ವಾಗತಿಸುತ್ತದೆ. ಆದರೆ ಈ ಅಧಿವೇಶನದಲ್ಲಿ ರೈತರ ಸಮಸ್ಯೆಗಳಿಗೆ ಆದ್ಯತೆ ನೀಡಬೇಕು. ವಿಶೇಷವಾಗಿ ಕೃಷಿ ಸಾಲ ಮನ್ನಾ ಸೇರಿದಂತೆ ರೈತರ ಪ್ರಮುಖ ಬೇಡಿಕೆಗಳ ಕುರಿತು ಬಿಜೆಪಿ ಪ್ರಸ್ತಾಪ ಮಾಡಲಿದೆ ಎಂದು ಹೇಳಿದರು.
ಇದೇ ವೇಳೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಉತ್ತರ ಕರ್ನಾಟಕ ಪ್ರವಾಸ ಕೈಗೊಂಡಿರುವ ವಿಚಾರವಾಗಿ, ಪ್ರವಾಸ ಕೇವಲ ರಾಜಕೀಯ ಕಾರ್ಯಕ್ರಮಗಳಿಗೆ ಸೀಮಿತವಾಗದೆ, ಬರಗಾಲದಿಂದ ಸಂಕಷ್ಟಕ್ಕೊಳಗಾಗಿರುವ ರೈತರ ಸಮಸ್ಯೆಗಳನ್ನು ಅರಿತುಕೊಂಡು ಅವರಿಗೆ ಪರಿಹಾರ ನೀಡುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಬಿಜೆಪಿ ಹೋರಾಟಕ್ಕೆ ಮಣಿದು ಉದ್ಯಾನವನ ತಿದ್ದುಪಡಿ ಮಸೂದೆ ಹೇಗೆ ಸರ್ಕಾಅರ ವಾಪಸ್ ಪಡೆಯಿತು. ಅದೇ ರೀತಿ ರೈತರ ವಿಚಾರದಲ್ಲೂ ಸೂಕ್ಷ್ಮತೆ ತೋರಬೇಕು. ರೈತರ ಬದುಕಿನೊಂದಿಗೆ ಚೆಲ್ಲಾಟವಾಡದೆ, ತಕ್ಷಣ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು.
ಉದ್ಯಾನವನ ಸಂರಕ್ಷಣೆ ತಿದ್ದುಪಡಿ ಬಿಲ್ ವಾಪಸ್: ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ
ಬೆಂಗಳೂರು: ಕರ್ನಾಟಕ ಉದ್ಯಾನವನ ಸಂರಕ್ಷಣೆ ತಿದ್ದುಪಡಿ ವಿಧೇಯಕವನ್ನು ರಾಜ್ಯ ಸಚಿವ ಸಂಪುಟ ಸಭೆ ವಾಪಸ್ ಪಡೆಯಲು ತೀರ್ಮಾನ ಕೈಗೊಂಡಿದೆ.
ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಉದ್ಯಾನವನಗಳ ಸಂರಕ್ಷಣೆ ತಿದ್ದುಪಡಿ ವಿಧೇಯಕ ಹಿಂಪಡೆಯಲು ತೀರ್ಮಾನಿಸಲಾಗಿದೆ. ಸಾರ್ವಜನಿಕರು ಮತ್ತು ವಿರೋಧ ಪಕ್ಷಗಳ ತೀವ್ರ ವಿರೋಧದ ಬಳಿಕ ರಾಜ್ಯ ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎನ್ನಲಾಗಿದೆ.
ಕಳೆದ ಅಧಿವೇಶನದಲ್ಲಿ ತರಾತುರಿಯಲ್ಲಿ ಅಂಗೀಕರಿಸಲಾಗಿದ್ದ ಈ ವಿಧೇಯಕಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಬೆಂಗಳೂರಿನ ಉದ್ಯಾನವನಗಳು ನಗರದ ಶ್ವಾಸಕೋಶ ಇದ್ದಂತೆ. ಅಂತಹ ಪ್ರಮುಖ ಉದ್ಯಾನವನಗಳ 5% ಜಾಗವನ್ನು ಖಾಸಗಿ ಉದ್ದೇಶಗಳಿಗೆ ಬಳಸಲು ಅವಕಾಶ ಕಲ್ಪಿಸುವುದರಿಂದ ಪಾರ್ಕ್‌ಗಳು ನಶಿಸಿ ಹೋಗುತ್ತವೆ ಎಂಬುದು ಸಾರ್ವಜನಿಕರ ಪ್ರಮುಖ ಆತಂಕವಾಗಿದೆ. ಅಭಿವೃದ್ಧಿಯ ಹೆಸರಿನಲ್ಲಿ ಮರಗಳನ್ನು ಕಡಿಯುವ ಸರ್ಕಾರದ ನಡೆಯ ಬಗ್ಗೆಯೂ ಟೀಕೆ ವ್ಯಕ್ತವಾಗಿತ್ತು.
ಕರ್ನಾಟಕ ಉದ್ಯಾನವನಗಳ ಸಂರಕ್ಷಣೆ ತಿದ್ದುಪಡಿ ವಿಧೇಯಕ ಕಳೆದ ವಿಧಾನಮಂಡಲ ಅಧಿವೇಶನದಲ್ಲಿ ಉಭಯ ಸದನಗಳಲ್ಲಿ ಬಿಲ್ ಪಾಸ್ ಆಗಿತ್ತು. ಅಂಗೀಕೃತ ವಿಧೇಯಕವನ್ನು ರಾಜ್ಯಪಾಲರಿಗೂ ಕಳುಹಿಸಲಾಗಿತ್ತು. ಆದರೆ ಈ ವಿಧೇಯಕ ಜಾರಿಗೆ ಸಾರ್ವಜನಿಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು.
ಈ ವಿಧೇಯಕದ ಪ್ರಕಾರ ಉದ್ಯಾನವನಗಳ ಶೇ.೫ರಷ್ಟು ಜಾಗ ಮಾರಾಟ, ಲೀಸ್ (ಬಾಡಿಗೆ), ಉಡುಗೊರೆ, ವಿನಿಮಯ ಅಥವಾ ಅಡಮಾನದ ಮೂಲಕ ಸರ್ಕಾರಿ ಇಲಕಹೆಗಳು, ಶಾಸನಬದ್ಧ ಸಂಸ್ಥೆಗಳು ಅಥವಾ ಸ್ಥಳೀಯ ಸಂಸ್ಥೆಗಳಿಗೆ ಹಸ್ತಾಂತರಿಸುವ ಅವಕಾಶ ನೀಡುವ ವಿಧೇಯಕ ಇದಾಗಿತ್ತು. ಇದೀಗ ಈ ವಿಧೇಯಕವನ್ನು ರಾಜ್ಯ ಸರ್ಕಾಅರ ವಾಪಸ್ ಪಡೆದುಕೊಂಡಿದೆ ಎಂ<ದು ತಿಳಿದುಬಂದಿದೆ.

