ಮುಖ್ಯಮಂತ್ರಿ ತವರಲ್ಲೇ ಮೈತ್ರಿ ನಾಯಕರ ಶಕ್ತಿ ಪ್ರದರ್ಶನ: ಒಂದೇ ವೇದಿಕೆಯಲ್ಲಿ ರಾಜಕೀಯ ದಿಗ್ಗಜರ ಸಮಾಗಮ

ಮೈಸೂರು: ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ದಿಗ್ಗಜರ ಸಮಾಗಮವಾಗಿದೆ. ಪ್ರಧಾನಿ ಮೋದಿ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಹೆಚ್.ಡಿ. ಕುಮಾರಸ್ವಾಮಿ ಸೇರಿದಂತೆ ಹಲವು ನಾಯಕರು ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ.

ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯ ಬೃಹತ್ ಸಮಾವೇಶ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದಿದೆ. ಬಿಜೆಪಿ ಹಾಗೂ ಜೆಡಿಎಸ್ ನಾಯಕರ ಸಮಾಗಮವಾಗಿದೆ.

ವೇದಿಕೆಗೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನು ಆತ್ಮೀಯವಾಗಿ ಸನ್ಮಾನಿಸಲಾಗಿದೆ. ಸಮಾವೇಶದಲ್ಲಿ ಮಾತನಾಡಿದ ಯಡಿಯೂರಪ್ಪ, ಪ್ರಧಾನಿ ಮೋದಿ ಇಡೀ ವಿಶ್ವವೇ ಮೆಚ್ಚಿದ ನಾಯಕರಾಗಿದ್ದಾರೆ. ಅಂಬೇಡ್ಕರ್ ಜಯಂತಿಯಂದೇ ಅವರು ಮೈಸೂರಿಗೆ ಬಂದಿರುವುದು ಸಂತೋಷವಾಗಿದೆ. ಕರ್ನಾಟಕದಲ್ಲಿ 28 ಸ್ಥಾನಗಳನ್ನು ನಾವು ಗೆಲ್ಲುತ್ತೇವೆ. ಕಾಂಗ್ರೆಸ್ ಅಧಿಕಾರದ ಕನಸು ಕಾಣುತ್ತಿದೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದಿಲ್ಲ. ಫಲಿತಾಂಶದ ನಂತರ ಅವರ ಅಡ್ರೆಸ್ ಕೂಡ ಇರುವುದಿಲ್ಲ ಎಂದು ಹೇಳಿದ್ದಾರೆ.

ಮಾಜಿ ಪ್ರಧಾನಿ ದೇವೇಗೌಡರು ಮಾತನಾಡಿ, ದೇಶಕ್ಕೆ ಗೌರವ ತಂದುಕೊಟ್ಟವರು ಪ್ರಧಾನಿ ಮೋದಿ. ವಿಶ್ವವೇ ಮೆಚ್ಚಿದ ನಾಯಕ ಅವರಾಗಿದ್ದಾರೆ. ಮೋದಿ ಯಶಸ್ವಿಯಾಗಿ ಹತ್ತು ವರ್ಷ ಆಡಳಿತ ನಡೆಸಿದ್ದಾರೆ ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read