ವಿಧಾನಸಭೆಯಲ್ಲಿ ಬಿಜೆಪಿ –ಜೆಡಿಎಸ್ ಸದಸ್ಯರಿಂದ ಅಹೋರಾತ್ರಿ ಧರಣಿ

ಬೆಂಗಳೂರು: ಮುಡಾ ಹಗರಣದ ಬಗ್ಗೆ ಚರ್ಚೆಗೆ ಅವಕಾಶ ನೀಡದ ಹಿನ್ನಲೆಯಲ್ಲಿ ವಿಧಾನಸಭೆಯಲ್ಲಿ ಬಿಜೆಪಿ, ಜೆಡಿಎಸ್ ಸದಸ್ಯರು ಅಹೋರಾತ್ರಿ ಧರಣಿ ಕೈಗೊಂಡಿದ್ದಾರೆ,

ಧರಣಿಯ ಸ್ಥಳಕ್ಕೆ ವಿಧಾನಸಭ ಕಾರ್ಯದರ್ಶಿ ಎಂ,ಕೆ, ವಿಶಾಲಾಕ್ಷಿ ಭೇಟಿ ನೀಡಿದ್ದು, ಶಾಸಕರಿಗೆ ರಾತ್ರಿ ಊಟದ ವ್ಯವಸ್ಥೆ ಬಗ್ಗೆ ವಿಚಾರಿಸಿದ್ದಾರೆ, ವಾಲ್ಮೀಕಿ ಹಾಗೂ ಮುಡಾ ಹಗರಣದ ಹಣದಿಂದ ನಮಗೆ ಊಟದ ವ್ಯವಸ್ಥೆ ಬೇಡ ಎಂದು ಬಿಜೆಪಿ ಶಾಸಕರು ಹೇಳಿದ್ದಾರೆ.

ರಾತ್ರಿಯ ಊಟ ಮತ್ತು ಹಾಸಿಗೆ ವ್ಯವಸ್ಥೆಯನ್ನು ಬಿಜೆಪಿ ಶಾಸಕರು ತಾವೇ ಮಾಡಿಕೊಂಡಿದ್ದಾರೆ. ಜಯನಗರ ಶಾಸಕ ಸಿ.ಕೆ. ರಾಮಮೂರ್ತಿ ಅವರಿಗೆ ಊಟ ಮತ್ತು ಹಾಸಿಗೆ ವ್ಯವಸ್ಥೆಯ ಹೊಣೆ ಹೊರಿಸಲಾಗಿದೆ.

ಮುಡಾ ಪ್ರಕರಣದ ಬಗ್ಗೆ ಸದನದಲ್ಲಿ ಚರ್ಚೆಗೆ ಅವಕಾಶ ನೀಡದ ಹಿನ್ನೆಲೆಯಲ್ಲಿ ವಿಧಾನಸಭೆಯಲ್ಲಿ ಬಿಜೆಪಿ, ಜೆಡಿಎಸ್ ಧರಣಿ ಮುಂದುವರೆಸಿವೆ. ಸದನದ ಬಾವಿಯಲ್ಲಿ ವಿಪಕ್ಷಗಳ ಧರಣಿ ಹಿನ್ನೆಲೆಯಲ್ಲಿ ಸ್ಪೀಕರ್ ಯು.ಟಿ. ಖಾದರ್ ನಾಳೆ ಬೆಳಿಗ್ಗೆ 9:30ಕ್ಕೆ ವಿಧಾನಸಭೆ ಕಲಾಪ ಮುಂದೂಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read