ರಾಜ್ಯ ಸರ್ಕಾರವನ್ನು ವಜಾಗೊಳಿಸುವಂತೆ ಆಗ್ರಹಿಸಿ ಬಿಜೆಪಿ, ಜೆಡಿಎಸ್ ರಾಜ್ಯಪಾಲರಿಗೆ ದೂರು

ಬೆಂಗಳೂರು : ವಿಧಾನಸೌಧದಲ್ಲಿ ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಆರೋಪದ ಹಿನ್ನೆಲೆಯಲ್ಲಿ ರಾಜಭವನಕ್ಕೆ ಬಿಜೆಪಿ, ಜೆಡಿಎಸ್‌ ಶಾಸಕರು ಪಾದಯಾತ್ರೆ ನಡೆಸಿದ್ದಾರೆ.

ರಾಝ್ಯ ಸರ್ಕಾರದ ವಿರುದ್ಧ ದೂರು ನೀಡಲು ವಿಪಕ್ಷ ನಾಯಕರು ಪಾದಯಾತ್ರೆ ನಡೆಸುತ್ತಿದ್ದು, ರಾಜ್ಯಪಾಲರಿಗೆ ರಾಜ್ಯ ಸರ್ಕಾರವನ್ನು ವಜಾಗೊಳಿಸುವಂತೆ ಬಿಜೆಪಿ, ಜೆಡಿಎಸ್‌ ನಾಯಕರು ಮನವಿ ಮಾಡಲಿದ್ದಾರೆ.

ವಿಧಾನಸೌಧದಲ್ಲಿ ಪಾಕ್‌ ಪರ ಘೋಷಣೆ ಕೂಗಿದ್ರೂ ಈವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಈವರೆಗೂ ಯಾರನ್ನೂ ಬಂಧಿಸಿಲ್ಲ. ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಹದಗೆಟ್ಟಿದೆ. ಭದ್ರತೆ ಇಲ್ಲವಾಗಿದೆ. ಕಾಂಗ್ರೆಸ್‌ ಸರ್ಕಾರವನ್ನು ವಜಾಗೊಳಿಸುವಂತೆ ಆಗ್ರಹಿಸಿ ಬಿಜೆಪಿ, ಜೆಡಿಎಸ್‌ ನಾಯಕರು ರಾಜ್ಯಪಾಲರನ್ನು ಭೇಟಿಯಾಗಿ ದೂರು ನೀಡಲಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read