HomeKarnatakaಬಿಜೆಪಿ, ಜೆಡಿಎಸ್ ನಿಂದ 25 ಶಾಸಕರು ಶೀಘ್ರವೇ ಕಾಂಗ್ರೆಸ್ ಸೇರ್ಪಡೆ: ಸಚಿವ ಎಂ.ಬಿ. ಪಾಟೀಲ್

ಬಿಜೆಪಿ, ಜೆಡಿಎಸ್ ನಿಂದ 25 ಶಾಸಕರು ಶೀಘ್ರವೇ ಕಾಂಗ್ರೆಸ್ ಸೇರ್ಪಡೆ: ಸಚಿವ ಎಂ.ಬಿ. ಪಾಟೀಲ್

ಚಿತ್ರದುರ್ಗ: ಬಿಜೆಪಿ ಮತ್ತು ಜೆಡಿಎಸ್ ಪಕ್ಷದ 25 ಶಾಸಕರು ಕಾಂಗ್ರೆಸ್ ಸೇರಲು ಸಜ್ಜಾಗಿದ್ದು, ಸೂಕ್ತ ಸಮಯಕ್ಕಾಗಿ ಕಾಯುತ್ತಿದ್ದಾರೆ. ಶೀಘ್ರವೇ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಳ್ಳುತ್ತೇವೆ ಎಂದು ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ.

ಶನಿವಾರ ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಯಾವ ಕ್ಷಣದಲ್ಲಾದರೂ ರಾಜೀನಾಮೆ ನೀಡಬಹುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿರುವುದು ಹಾಸ್ಯಾಸ್ಪದವಾಗಿದೆ. ಅವರು ಎಷ್ಟು ದಿನ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಇರುತ್ತಾರೆ. ಅವರ ಕುರ್ಚಿಯ ನಾಲ್ಕು ಕಾಲುಗಳಲ್ಲಿ ಮೂರು ಈಗಾಗಲೇ ಮುರಿದಿವೆ. ಒಂದೇ ಕಾಲಿನಲ್ಲಿ ಅವರ ಕುರ್ಚಿ ನಿಂತಿದೆ ಎಂದು ವ್ಯಂಗ್ಯವಾಡಿದ್ದಾರೆ.

ಬಿಜೆಪಿಯ ಕೆಲವು ಶಾಸಕರು ಈಗಾಗಲೇ ಕಾಂಗ್ರೆಸ್ ನೊಂದಿಗೆ ಗುರುತಿಸಿಕೊಂಡಿದ್ದು, ಜೆಡಿಎಸ್ ನಿಂದಲೂ ದೊಡ್ಡ ತಂಡ ಕಾಂಗ್ರೆಸ್ ಗೆ ಬರಲಿದೆ. ಹೀಗಿರುವಾಗ ರಮೇಶ ಜಾರಕಿಹೊಳಿಯವರು ಕಾಂಗ್ರೆಸ್ ಪಕ್ಷದ 60 ಶಾಸಕರನ್ನು ಬಿಜೆಪಿಗೆ ಕರೆದೊಯ್ಯುತ್ತಾರೆ ಎನ್ನುವುದನ್ನು ನಂಬಲು ಸಾಧ್ಯವೇ ಎಂದು ಪ್ರಶ್ನಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular