HomeKarnatakaBIG NEWS: ಮೈಸೂರು ತಲುಪಿದ ದೋಸ್ತಿ ನಾಯಕರ ಪಾದಯಾತ್ರೆ: ಕೈಕೈ ಹಿಡಿದು ಭರ್ಜರಿ ಸ್ಟೆಪ್ ಹಾಕಿದ...

BIG NEWS: ಮೈಸೂರು ತಲುಪಿದ ದೋಸ್ತಿ ನಾಯಕರ ಪಾದಯಾತ್ರೆ: ಕೈಕೈ ಹಿಡಿದು ಭರ್ಜರಿ ಸ್ಟೆಪ್ ಹಾಕಿದ ಬಿಜೆಪಿ-ಜೆಡಿಎಸ್ ನಾಯಕರು

ಮೈಸೂರು: ಮುಡಾ ಹಗರಣದ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷಗಳಾದ ಬಿಜೆಪಿ-ಜೆಡಿಎಸ್ ನಾಯಕರು ಹಮ್ಮಿಕೊಂಡಿದ್ದ ಮೈಸೂರು ಚಲೋ ಪಾದಯಾತ್ರೆ ಮೈಸೂರು ತಲುಪಿದೆ.

ಆಗಸ್ಟ್ 3ರಂದು ಬೆಂಗಳೂರಿನ ಕೆಂಗೇರಿಯಿಂದ ಆರಂಭವಾದ ಬಿಜೆಪಿ-ಜೆಡಿಎಸ್ ದೋಸ್ತಿ ನಾಯಕರ ಪಾದಯಾತ್ರೆ ಇಂದು ಮೈಸೂರು ತಲುಪಿದೆ. ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಸಂಜೆ ಬಿಜೆಪಿ-ಜೆಡಿಎಸ್ ಶಕ್ತಿ ಪ್ರದರ್ಶನ ನಡೆಯಲಿದ್ದು, ಬೃಹತ್ ಸಮಾವೇಶ ಆಯೋಜಿಸಲಾಗಿದೆ.

ಬೆಂಗಳೂರಿನಿಂದ ಮೈಸೂರಿನವರೆಗೂ ನಡೆದ ಪಾದಯಾತ್ರೆಯುದ್ದಕ್ಕೂ ವಿಪಕ್ಷಗಳು ರಾಜ್ಯ ಕಾಂಗ್ರೆಸ್ ಸರ್ಕಾರ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇಂದು ಪಾದಯಾತ್ರೆ ಮೈಸೂರು ತಲುಪುತ್ತಿದ್ದಂತೆ ಬಿಜೆಪಿ-ಜೆಡಿಎಸ್ ನಾಯಕರು ಕೈಕೈ ಹಿಡಿದು ರಸ್ತೆಯಲ್ಲಿಯೇ ಭರ್ಜರಿ ಸ್ಟೆಪ್ ಹಾಕಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೆಲವೇ ಹೊತ್ತಲ್ಲಿ ಮಹಾರಾಜಾ ಕಾಲೇಜು ಮೈದಾನದಲ್ಲಿ ಮುಡಾ ಹಗರಣದ ವಿರುದ್ಧ ಬಿಜೆಪಿ-ಜೆಡಿಎಸ್ ಸಮಾವೇಶ ನಡೆಯಲಿದ್ದು, ಸರ್ಕಾರದ ವಿರುದ್ಧ ದೋಸ್ತಿ ನಾಯಕರು ಕಹಳೆ ಮೊಳಗಲಿದೆ.

 

For Latest News Updates, Join Our Whatsapp Community🚩
RELATED ARTICLES

Most Popular