BREAKING NEWS: ಸರ್ಕಾರವನ್ನು ವಜಾಗೊಳಿಸುವಂತೆ ಆಗ್ರಹಿಸಿ ರಾಜ್ಯಪಾಲರಿಗೆ ದೂರು ಸಲ್ಲಿಸಿದ ಬಿಜೆಪಿ ನಾಯಕರು

ಬೆಂಗಳೂರು: ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದವರ ವಿರುದ್ಧ ಕ್ರಮ ಕೈಗೊಳ್ಳದ ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ವಜಾಗೊಳಿಸುವಂತೆ ಒತ್ತಾಯಿಸಿ ವಿಪಕ್ಷ ಬಿಜೆಪಿ ನಾಯಕರು ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ.

ರಾಜ್ಯಸಭಾ ಚುನಾವಣೆ ಗೆಲುವಿನ ಸಂಭ್ರಮದ ವೇಳೆ ವಿಧಾನಸೌಧದಲ್ಲಿ ಕಿಡಿಗೇಡಿಗಳು ಪಾಕ್ ಪರ ಘೋಷಣೆ ಕೂಗಿರುವ ಆರೋಪಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಿ ಕ್ರಮ ಕೈಗೊಳ್ಳದೇ ವಿಚಾರಣೆ ನಡೆಸಿ ಕಳುಹಿಸಿದ್ದಾರೆ ಎಂದು ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ಆರೋಪಿಸಿದ್ದಾರೆ. ಘಟನೆ ನಡೆದು ಎರಡು ದಿನ ಕಳೆದರೂ ಆರೋಪಿಯನ್ನು ಬಂಧಿಸಿಲ್ಲ. ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ಒತ್ತಾಯಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ವಿಧಾನಸೌಧದಿಂದ ರಾಜಭವನದವರೆಗೆ ಪಾದಯಾತ್ರೆ ನಡೆಸಿದ ಬಿಜೆಪಿ-ಜೆಡಿಎಸ್ ಸದಸ್ಯರು ಬಳಿಕ ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಸರ್ಕಾರದ ವಿರುದ್ಧ ದೂರು ಸಲ್ಲಿಸಿದರು. ಕಾಂಗ್ರೆಸ್ ಸರ್ಕಾರವನ್ನು ವಜಾ ಮಾಡುವಂತೆ ಮನವಿ ಮಾಡಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read