BREAKING : ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಳ್ಳಲಿದೆ : ಮಾಜಿ ಸಿಎಂ ‘BSY’ ಹೇಳಿಕೆ

ಬೆಂಗಳೂರು : ಬಿಜೆಪಿ-ಜೆಡಿಎಸ್ ( BJP-JDS) ಮೈತ್ರಿ ಮಾಡಿಕೊಳ್ಳಲಿದೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ಇಂದು ಸುದ್ದಿಗಾರರ ಜೊತೆ ಮಾತನಾಡಿರುವ ಮಾಜಿ ಸಿಎಂ ಯಡಿಯೂರಪ್ಪ ‘ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಳ್ಳಲಿದೆ . 4-5 ಸ್ಥಾನ ಜೆಡಿಎಸ್ ಗೆ ಕೊಡಲು ಅಮಿತ್ ಶಾ ಒಪ್ಪಿದ್ದಾರೆ. ಈ ಮೂಲಕ ನಮಗೆ ಶಕ್ತಿ ಬಂದಂತಾಗಿದೆ. ಈ ಮೂಲಕ ನಾವು 20-25 ಕ್ಷೇತ್ರದಲ್ಲಿ ಗೆಲ್ಲಲಿದ್ದೇವೆ ಎಂದು ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು. ಮೈತ್ರಿ ಬಗ್ಗೆ ನಮ್ಮ ವರಿಷ್ಟರ ಜೊತೆ ಕೂಡ ಮಾತನಾಡಿದ್ದೇನೆ, ಅವರು ಕೂಡ ಒಪ್ಪಿಗೆ ನೀಡಿದ್ದಾರೆ’ ಎಂದು ಯಡಿಯೂರಪ್ಪ ಹೇಳಿದರು.

ಕಾಂಗ್ರೆಸ್ ಗೆ ಶಾಕ್ ಕೊಡಲು ನಿರ್ಧರಿಸಿರುವ ಜೆಡಿಎಸ್ ಲೋಕಸಭಾ ಚುನಾವಣೆ ಸಂಬಂಧ ದೆಹಲಿಯಲ್ಲಿ ಬಿಜೆಪಿ ವರಿಷ್ಠ ನಾಯಕರನ್ನು ಭೇಟಿ ಮಾಡಿದ್ದಾರೆ. ಇತ್ತೀಚೆಗೆ ಪ್ರಜ್ವಲ್ ರೇವಣ್ಣ ಅವರ ಕೋರ್ಟ್ ಕೇಸ್ ಗೆ ಸಂಬಂಧಿಸಿದಂತೆ ವಕೀಲರ ಭೇಟಿಗೆ ತೆರಳಿದ್ದ ದೇವೇಗೌಡರು ಇದೇ ವೇಳೆ ರಹಸ್ಯವಾಗಿ ಅಮಿತ್ ಶಾ ಜೊತೆ ಚರ್ಚೆ ನಡೆಸಿದ್ದರು. ಈ ಬೆನ್ನಲ್ಲೇ ಬಿಎಸ್ವೈ ಬಹಿರಂಗವಾಗಿ ಬಿಜೆಪಿ ಜೆಡಿಎಸ್ ಮೈತ್ರಿಯಾಗಲಿದೆ ಎಂದು ಹೇಳಿದ್ದಾರೆ. ಮೈತ್ರಿ ಬಗ್ಗೆ ಇತ್ತೀಚೆಗೆ ಬರೀ ಊಹಾಪೂಹ, ಟ್ವೀಟ್ ಗಳು ಬಂದಿದ್ದವು. ಆದರೆ ಇದೀಗ ಬಿಜೆಪಿ ನಾಯಕರೇ ಮೈತ್ರಿ ಬಗ್ಗೆ ಬಹಿರಂಗವಾದ ಹೇಳಿಕೆ ನೀಡಿದ್ದು, ಕಾಂಗ್ರೆಸ್   ಗೆ  ಮಾಸ್ಟರ್ ಸ್ಟ್ರೋಕ್ ನೀಡಲು ಬಿಜೆಪಿ-ಜೆಡಿಎಸ್ ನಿರ್ಧರಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read