BIG NEWS : ಬಿಜೆಪಿ- ಜೆಡಿಎಸ್ ಇದೇ ರೀತಿ ಮುಖಭಂಗ ಅನುಭವಿಸುವುದು ಖಂಡಿತ, ಸತ್ಯಮೇವ ಜಯತೆ : CM ಸಿದ್ದರಾಮಯ್ಯ ಟ್ವೀಟ್

ಬೆಂಗಳೂರು : ಬಿಜೆಪಿ- ಜೆಡಿಎಸ್ ಇದೇ ರೀತಿ ಮುಖಭಂಗ ಅನುಭವಿಸುವುದು ಖಂಡಿತ, ಸತ್ಯಮೇವ ಜಯತೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಮುಡಾ ಪ್ರಕರಣ ಒಂದು ನೆಪ ಅಷ್ಟೇ. ಬಡವರು ಮತ್ತು ಶೋಷಿತರ ಪರವಾಗಿರುವ ನಮ್ಮ ಸರ್ಕಾರದ ಯೋಜನೆಗಳನ್ನು ನಿಲ್ಲಿಸಬೇಕೆಂಬುದೇ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಮುಖ್ಯ ಉದ್ದೇಶ. ಮುಡಾ ಪ್ರಕರಣವನ್ನು ಸೃಷ್ಟಿಸಿ, ಅದರ ಮೂಲಕ ಸುಳ್ಳು ಆರೋಪಗಳನ್ನು ಮಾಡುತ್ತಿರುವವರ ಮುಖಗಳನ್ನು ಒಮ್ಮೆ ರಾಜ್ಯದ ಜನತೆ ಸರಿಯಾಗಿ ನೋಡಬೇಕೆಂದು ಮನವಿ ಮಾಡುತ್ತೇನೆ. ನನ್ನ ರಾಜೀನಾಮೆ ಕೇಳುತ್ತಿರುವ ಇದೇ ನಾಯಕರು ನಾನು ರಾಜ್ಯದ ಬಡವರು, ಶೋಷಿತರ ಪರವಾಗಿ ಜಾರಿಗೆ ತಂದಿದ್ದ ಯೋಜನೆಗಳನ್ನು ವಿರೋಧಿಸಿದವರೇ ಆಗಿದ್ದಾರೆ.

ಇದೇ ಬಿಜೆಪಿ, ಜೆಡಿಎಸ್ ನಾಯಕರು ನಾನು ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದಾಗ ಜಾರಿಗೆ ತಂದಿದ್ದ ಅನ್ನಭಾಗ್ಯ, ಕ್ಷೀರ ಭಾಗ್ಯ, ಕ್ಷೀರ ಧಾರೆ, ವಿದ್ಯಾಸಿರಿ, ಕೃಷಿಭಾಗ್ಯ, ಪಶುಭಾಗ್ಯ, ಇಂದಿರಾ ಕ್ಯಾಂಟೀನ್ ಯೋಜನೆಗಳನ್ನು ವಿರೋಧಿಸಿದ್ದಾರೆ. ಇಂದು ನನ್ನ ವಿರುದ್ಧ ರಾಜಕೀಯ ಸಂಚು ನಡೆಸುತ್ತಿರುವ ಇದೇ ನಾಯಕರು ಎಸ್‌ಸಿಎಸ್‌ಪಿ/ಟಿಎಸ್‌‌ಪಿ ಕಾಯ್ದೆಯನ್ನು ವಿರೋಧಿಸಿದ್ದಾರೆ. ಕರ್ನಾಟಕದ ಜನತೆ ಇಲ್ಲಿಯ ವರೆಗೆ ಭಾರತೀಯ ಜನತಾ ಪಕ್ಷಕ್ಕೆ ಸ್ವಂತ ಬಲದಿಂದ ಅಧಿಕಾರಕ್ಕೆ ಬರುವಷ್ಟು ಬಹುಮತ ನೀಡಿಲ್ಲ. ಇಲ್ಲಿಯ ವರೆಗೆ ಬಿಜೆಪಿ ಅನೈತಿಕವಾಗಿ, ದುಡ್ಡಿನ ಬಲದಿಂದ ಆಪರೇಷನ್ ಕಮಲ ನಡೆಸಿ ಅಧಿಕಾರಕ್ಕೆ ಬಂದದ್ದು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನತೆ ಆಪರೇಷನ್ ಕಮಲಕ್ಕೆ ಅವಕಾಶವೇ ಇಲ್ಲದಂತೆ ನಮ್ಮ ಪಕ್ಷಕ್ಕೆ 136 ಸದಸ್ಯರ ಬಲ ನೀಡಿ ಗೆಲ್ಲಿಸಿದರು. ಇದರಿಂದ ಹತಾಶೆಗೀಡಾಗಿರುವ ಬಿಜೆಪಿ, ಜೆಡಿಎಸ್ ನಾಯಕರು, ರಾಜಭವನವನ್ನು ದುರ್ಬಳಕೆ ಮಾಡಿಕೊಂಡು ನನ್ನ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುವ ಮೂಲಕ ನಮ್ಮ ಸರ್ಕಾರವನ್ನು ಅಸ್ಥಿರಗೊಳಿಸುವ ಹುನ್ನಾರ ನಡೆಸಿದ್ದಾರೆ. ರಾಜಭವನದ ದುರ್ಬಳಕೆ ಮೂಲಕ ವಿರೋಧ ಪಕ್ಷಗಳ ಸರ್ಕಾರವನ್ನು ಹಣಿಯುವ ಸಂಚನ್ನು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶಾದ್ಯಂತ ನಡೆಸುತ್ತಿದೆ. ನನ್ನ ಪ್ರಕರಣದಲ್ಲಿಯೂ ಬಿಜೆಪಿ ಮತ್ತು ಜೆಡಿಎಸ್ ಇದೇ ರೀತಿ ಮುಖಭಂಗ ಅನುಭವಿಸುವುದು ಖಂಡಿತ. ಸತ್ಯಮೇವ ಜಯತೇ.. ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.

https://twitter.com/siddaramaiah/status/1838500676378276279

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read