HomeKarnatakaBIG NEWS: ಬಿಜೆಪಿ-ಜೆಡಿಎಸ್ ಗೆ ಮತ್ತೊಂದು ಶಾಕ್; ಮೈತ್ರಿಗೆ ಸೆಡ್ಡು ಹೊಡೆದು 42 ನಾಯಕರು ಕಾಂಗ್ರೆಸ್...

BIG NEWS: ಬಿಜೆಪಿ-ಜೆಡಿಎಸ್ ಗೆ ಮತ್ತೊಂದು ಶಾಕ್; ಮೈತ್ರಿಗೆ ಸೆಡ್ಡು ಹೊಡೆದು 42 ನಾಯಕರು ಕಾಂಗ್ರೆಸ್ ಸೇರ್ಪಡೆಗೆ ನಿರ್ಧಾರ; ಹೊಸ ಬಾಂಬ್ ಸಿಡಿಸಿದ ಡಿಸಿಎಂ

ಬೆಂಗಳೂರು: ಬಿಜೆಪಿ ನಾಯಕ, ಶಿರಹಟ್ಟಿ ಕ್ಷೇತ್ರದ ಮಾಜಿ ಶಾಸಕ ರಾಮಪ್ಪ ಲಮಾಣಿ ಇಂದು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಇದೇ ಸಂದರ್ಭದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಹೊಸ ಬಾಂಬ್ ಸಿಡಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಬಿಜೆಪಿ ನಾಯಕ ರಾಮಪ್ಪ ಲಮಾಣಿ ಕಾಂಗ್ರೆಸ್ ಸೇರ್ಪಡೆ ಬಳಿಕ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಬಿಜೆಪಿ-ಜೆಡಿಎಸ್ ಮೈತ್ರಿಗೆ ಬೇಸತ್ತು ದೊಡ್ಡ ಸಂಖ್ಯೆಯಲ್ಲಿ ಹಲವು ನಾಯಕರು ಕಾಂಗ್ರೆಸ್ ಸೇರಲು ಸಜ್ಜಾಗಿದ್ದಾರೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾಂಗ್ರೆಸ್ ಸೇರಲು 42 ನಾಯಕರು ಅರ್ಜಿ ಹಾಕಿದ್ದಾರೆ. ಲೋಕಸಭಾ ಚುನಾವಣೆ ನಿಟ್ಟಿನಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ. ಮೈತ್ರಿ ವಿರೋಧಿಸಿ 42 ನಾಯಕರು ಕಾಂಗ್ರೆಸ್ ಸೇರುತ್ತಿದ್ದಾರೆ. ನಂಬರ್ ಹೇಳಬಾರದು ಆದರೆ ಹೇಳಬೇಕಾದ ಪರಿಸ್ಥಿತಿ. ಆಪ್ ನ 100ಕ್ಕೂ ಹೆಚ್ಚು ಮುಖಂಡರು ಕಾಂಗ್ರೆಸ್ ಸೇರಿದ್ದಾರೆ. ಬಿಜೆಪಿಯ ಒಂದು ಟೀಂ ಸಿನಿಮಾ ರೀತಿ ನಮ್ಮ ಜೊತೆ ಮಾತುಕತೆ ನಡೆಸಿದೆ ಎಂದು ಹೇಳುವ ಮೂಲಕ ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ ಸೃಷ್ಟಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular