BIG BREAKING: ಬಿಜೆಪಿಯಿಂದ ಕೆ.ಎಸ್. ಈಶ್ವರಪ್ಪ ಉಚ್ಚಾಟನೆ

ಬೆಂಗಳೂರು: ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಕೆ.ಎಸ್. ಈಶ್ವರಪ್ಪ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ.

ಬಿಜೆಪಿಯಿಂದ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರನ್ನು ಉಚ್ಚಾಟನೆ ಮಾಡಲಾಗಿದೆ. ಆರು ವರ್ಷಗಳ ಕಾಲ ಬಿಜೆಪಿಯಿಂದ ಉಚ್ಚಾಟನೆ ಮಾಡಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್ ಆದೇಶ ಹೊರಡಿಸಿದ್ದಾರೆ.

ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಪುತ್ರ ಕೆ.ಇ. ಕಾಂತೇಶ್ ಅವರಿಗೆ ಟಿಕೆಟ್ ಕೈತಪ್ಪಿದ್ದರಿಂದ ಅಸಮಾಧಾನಗೊಂಡಿದ್ದ ಕೆ.ಎಸ್. ಈಶ್ವರಪ್ಪ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ಅವರ ಮನವೊಲಿಸಲು ಬಿಜೆಪಿ ನಾಯಕರು ನಡೆಸಿದ ಪ್ರಯತ್ನಗಳೆಲ್ಲವೂ ವಿಫಲವಾಗಿವೆ. ಯಡಿಯೂರಪ್ಪ ಮತ್ತು ಪುತ್ರರ ವಿರುದ್ಧ ಬಹಿರಂಗವಾಗಿಯೇ ಆಕ್ರೋಶ ವ್ಯಕ್ತಪಡಿಸುತ್ತಿದ್ದ ಈಶ್ವರಪ್ಪ ನಾಮಪತ್ರ ವಾಪಸ್ ಪಡೆಯುವ ಕೊನೆಯ ದಿನ ತಮ್ಮ ಉಮೇದುಗಾರಿಕೆ ವಾಪಸ್ ಪಡೆಯಬಹುದೆಂಬ ನಿರೀಕ್ಷೆ ಬಿಜೆಪಿ ನಾಯಕರಲ್ಲಿತ್ತು.

ಆದರೆ, ಯಾವುದೇ ಕಾರಣಕ್ಕೂ ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಈ ಮೊದಲೇ ಘೋಷಿಸಿದ್ದ ಈಶ್ವರಪ್ಪ ತಮ್ಮನ್ನು ಪಕ್ಷದಿಂದ ಉಚ್ಛಾಟಿಸಬಹುದು ಅಷ್ಟೇ. ಅದಕ್ಕಿಂತ ಏನೂ ಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು ಗುಡುಗಿದ್ದರು. ಅಂತೆಯೇ ಅವರು ಕಣದಲ್ಲಿ ಉಳಿದುಕೊಂಡಿದ್ದು, ಬಿಜೆಪಿಯಿಂದ ಶಿಸ್ತು ಕ್ರಮ ಜರುಗಿಸಿ ಆರು ವರ್ಷಗಳ ಕಾಲ ಈಶ್ವರಪ್ಪ ಅವರನ್ನು ಉಚ್ಚಾಟನೆ ಮಾಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read