HomeKarnatakaರಾಜ್ಯ ಸರ್ಕಾರದ ವಿರುದ್ಧ ‘ಕಾವೇರಿ ಅಸ್ತ್ರ’ ಪ್ರಯೋಗಿಸಲು ಮುಂದಾದ ಬಿಜೆಪಿ: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ...

ರಾಜ್ಯ ಸರ್ಕಾರದ ವಿರುದ್ಧ ‘ಕಾವೇರಿ ಅಸ್ತ್ರ’ ಪ್ರಯೋಗಿಸಲು ಮುಂದಾದ ಬಿಜೆಪಿ: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿಂದು ಮಹತ್ವದ ಸಭೆ; ಸುಮಲತಾ ಭಾಗಿ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆಗೆ ಬಿಜೆಪಿ ವಿರೋಧ ವ್ಯಕ್ತಪಡಿಸಿದ್ದು, ಮುಂದಿನ ಹೋರಾಟದ ರೂಪುರೇಷೆ ಸಿದ್ಧಪಡಿಸಲು ಮಂಡ್ಯದಲ್ಲಿಂದು ಮಹತ್ವದ ಸಭೆ ನಡೆಸಲಾಗುವುದು.

ರಾಜ್ಯ ಸರ್ಕಾರದ ವಿರುದ್ಧ ಕಾವೇರಿ ಅಸ್ತ್ರ ಪ್ರಯೋಗಿಸಲು ಬಿಜೆಪಿ ಮುಂದಾಗಿದೆ. ಇಂದು 5 ಜಿಲ್ಲೆಗಳ ಬಿಜೆಪಿ ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಪರಾಜಿತ ಅಭ್ಯರ್ಥಿಗಳು, ಮುಖಂಡರ ಸಭೆ ನಡೆಸಲಾಗುವುದು. ಬಿಜೆಪಿ ಸಭೆಯಲ್ಲಿ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಭಾಗವಹಿಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾವೇರಿ ನದಿ ನೀರು ವಿಚಾರದ ಬಗ್ಗೆ ಚರ್ಚೆ ನಡೆಸಲಿದ್ದು, ಮುಂದಿನ ಹೋರಾಟದ ರೂಪುರೇಷೆ ಕುರಿತು ಸಮಾಲೋಚನೆ ನಡೆಸಲಾಗುವುದು. ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಚಾಮರಾಜನಗರ, ಮೈಸೂರು ಜಿಲ್ಲೆಯ ಬಿಜೆಪಿ ಪ್ರತಿನಿಧಿಗಳು, ಪರಾಜಿತ ಅಭ್ಯರ್ಥಿಗಳು ಮುಖಂಡರು ಭಾಗವಹಿಸಲಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular