HomeKarnatakaಬಾಂಬ್ ಬ್ಲಾಸ್ಟ್ ಮಾಡಿದವರು ಬಿಜೆಪಿ ನಾಯಕರಾದ್ರೂ ಗುಂಡಿಟ್ಟು ಕೊಲ್ಲಿ -ಶಾಸಕ ಬೇಳೂರು ಗೋಪಾಲಕೃಷ್ಣ

ಬಾಂಬ್ ಬ್ಲಾಸ್ಟ್ ಮಾಡಿದವರು ಬಿಜೆಪಿ ನಾಯಕರಾದ್ರೂ ಗುಂಡಿಟ್ಟು ಕೊಲ್ಲಿ -ಶಾಸಕ ಬೇಳೂರು ಗೋಪಾಲಕೃಷ್ಣ

ಶಿವಮೊಗ್ಗ : ಬಾಂಬ್ ಬ್ಲಾಸ್ಟ್ ಮಾಡಿದವರು ಬಿಜೆಪಿ ನಾಯಕರಾದ್ರೂ ಗುಂಡಿಟ್ಟು ಕೊಲ್ಲಿ ಎಂದು ಸಾಗರದ ಶಾಸಕ ಬೇಳೂರು ಗೋಪಾಲಕೃಷ್ಣ ವಾಗ್ಧಾಳಿ ನಡೆಸಿದ್ದಾರೆ.

ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಥಹಳ್ಳಿ ಮೂಲದ ಬಿಜೆಪಿ ಮುಖಂಡನನ್ನು ವಿಚಾರಣೆ ನಡೆಸಲಾಗುತ್ತಿದೆ ಎನ್ನಲಾಗಿದೆ. ಇದರ ನಡುವೆ ಹೇಳಿಕೆ ನೀಡಿದ ಶಾಸಕರು ಬಾಂಬ್ ಬ್ಲಾಸ್ಟ್ ಮಾಡಿದವರು ಯಾರೇ ಆಗಲಿ, ಬಾಂಬ್ ಬ್ಲಾಸ್ಟ್ ಮಾಡಿದವರು ಬಿಜೆಪಿ ನಾಯಕರಾದ್ರೂ ಗುಂಡಿಟ್ಟು ಕೊಲ್ಲಿ ಎಂದು ಸಾಗರದ ಶಾಸಕ ಬೇಳೂರು ಗೋಪಾಲಕೃಷ್ಣ ವಾಗ್ಧಾಳಿ ನಡೆಸಿದ್ದಾರೆ.

ಅಷ್ಟೇ ಅಲ್ಲ ಪಾಕಿಸ್ತಾನ್ ಜಿಂದಾಬಾದ್ ಎನ್ನುವವರನ್ನು ಕೂಡ ಗುಂಡಿಟ್ಟು ಕೊಲ್ಲಬೇಕು, ಅಂತಹವರನ್ನು ಬಿಡಬಾರದು ಎಂದು ಹೇಳಿಕೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಥಹಳ್ಳಿಯ ಬಿಜೆಪಿ ಮುಖಂಡನನ್ನು ಎನ್ ಐ ಎ ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ. ಯಾರು ಎಂಬುದು ಇನ್ನೂ ಕೂಡ ಬಹಿರಂಗವಾಗಿಲ್ಲ. ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 10 ದಿನದ ಹಿಂದೆ ಬೆಳ್ಳಂ ಬೆಳಗ್ಗೆ ಎನ್ ಐ ಎ ಅಧಿಕಾರಿಗಳು ಹಲವು ಮನೆ ಹಾಗೂ ಅಂಗಡಿಗಳ ಮೇಲೆ ದಾಳಿ ನಡೆಸಿದ್ದರು. ಈ ಬೆನ್ನಲ್ಲೇ ತೀರ್ಥಹಳ್ಳಿಯ ಬಿಜೆಪಿ ಮುಖಂಡನನ್ನು ಎನ್ ಐ ಎ ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ.

 

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular