HomeKarnatakaಬಿಜೆಪಿ ಮುಖಂಡನ ಕಾರ್ ಮೇಲೆ ಕಲ್ಲು ತೂರಾಟ: ತಡರಾತ್ರಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ

ಬಿಜೆಪಿ ಮುಖಂಡನ ಕಾರ್ ಮೇಲೆ ಕಲ್ಲು ತೂರಾಟ: ತಡರಾತ್ರಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ

ಚಿತ್ರದುರ್ಗ: ಚಳ್ಳಕೆರೆ ಬಿಜೆಪಿ ಮಂಡಲ ಅಧ್ಯಕ್ಷನ ಕಾರ್ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಬೆಳಗಟ್ಟ ಗ್ರಾಮದ ಬಳಿ ಕಾರ್ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ.

ಬೆಳಗಟ್ಟ ಗ್ರಾಮದಲ್ಲಿ ನಿನ್ನೆ ರಾತ್ರಿ 9:30 ವೇಳೆಗೆ ಕಾರಿನ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಸೂರನಹಳ್ಳಿ ಶ್ರೀನಿವಾಸ್ ಅವರು ಬೆಳಗಟ್ಟ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾಂಗ್ರೆಸ್ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ್ದಾರೆ ಎಂದು ಬಿಜೆಪಿ ಮುಖಂಡರು ಆರೋಪಿಸಿದ್ದಾರೆ. ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ತುರುವನೂರು ಪೊಲೀಸ್ ಠಾಣೆ ಎದುರು ತಡರಾತ್ರಿ ಪ್ರತಿಭಟನೆ ನಡೆಸಲಾಗಿದೆ. ಬಿಜೆಪಿ ಅಭ್ಯರ್ಥಿ ಅನಿಲ್ ಕುಮಾರ್ ನೇತೃತ್ವದಲ್ಲಿ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿ ದುಷ್ಕರ್ಮಿಗಳ ಬಂಧನಕ್ಕೆ ಒತ್ತಾಯಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular