BREAKING NEWS: ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಪೊಲೀಸ್ ಕಸ್ಟಡಿಗೆ

ಹಾಸನ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟಿರುವ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡರಿಗೆ ಪೊಲೀಸ್ ಕಸ್ಟಡಿಗೆ ನೀಡಿ ಜೆಎಂಎಫ್ ಸಿ ಕೋರ್ಟ್ ಆದೇಶ ಹೊರಡಿಸಿದೆ.

ಹಾಸನದ ಹೊಳೆನರಸೀಪುರ ಠಾಣೆ ಪೊಲೀಸರು ದೇವರಾಜೇಗೌಡರನ್ನು ಇಂದು ಹೊಳೆನರಸೀಪುರದ ಜೆಎಂಎಫ್ ಸಿ ಕೋರ್ಟ್ ಗೆ ಹಾಜರುಪಡಿಸಿದ್ದರು. ಈ ವೇಳೆ ಹೆಚ್ಚಿನ ವಿಚಾರಣೆಗಾಗಿ ದೇವರಾಜೇಗೌಡರನ್ನು ಕಸ್ಟಡಿಗೆ ನೀಡುವಂತೆ ಕೋರಿದ್ದರು.

ಪೊಲೀಸರ ಮನವಿ ಪುರಸ್ಕರಿಸಿದ ನ್ಯಾಯಾಲಯ ದೇವರಾಜೇಗೌಡಗೆ ಮೂರು ದಿನ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ. ನಾಳೆ ಬೆಳಿಗ್ಗೆ 9 ಗಂಟೆಯಿಂದ ಮೇ 16ರ ರಾತ್ರಿವರೆಗೆ ದೇವರಾಜೇಗೌಡರನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read