HomeKarnatakaBREAKING NEWS: ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಪೊಲೀಸ್ ಕಸ್ಟಡಿಗೆ

BREAKING NEWS: ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಪೊಲೀಸ್ ಕಸ್ಟಡಿಗೆ

ಹಾಸನ: ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಅವರನ್ನು ಪೊಲೀಸರು ಕಸ್ಟಡಿಗೆ ಪಡೆದಿದ್ದಾರೆ.

ಹಾಸನ ಜಿಲ್ಲಾ ಕಾರಾಗೃಹದಲ್ಲಿದ್ದ ದೇವರಾಜೇಗೌಡ ಅವರನ್ನು ಹಾಸನ ಜಿಲ್ಲೆಯ ಹೊಳೆನರಸೀಪುರ ಪೊಲೀಸರು ಕಸ್ಟಡಿಗೆ ಪಡೆದಿದ್ದಾರೆ. ಹೊಳೆನರಸೀಪುರ ಡಿವೈಎಸ್ ಪಿ ಅಶೋಕ್ ನೇತೃತ್ವದಲ್ಲಿ ದೇವರಾಜೇಗೌಡ ಅವರನ್ನು ಕರೆದೊಯ್ಯಲಾಗಿದೆ.

ದೇವರಾಜೇಗೌಡರನ್ನು ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ನೀಡುವಂತೆ ಮೇ 13ರಂದು ಹೊಳೆನರಸೀಪುರ ಪೊಲೀಸರು ಜೆ ಎಂ ಎಫ್ ಸಿ ಕೋರ್ಟ್ ಗೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಕೋರ್ಟ್ ಮೇ 16ರವರೆಗೆ ದೇವರಾಜೆಗೌಡರನ್ನು ಹೊಳೆನರಸೀಪುರ ಪೊಲೀಸರ ಕಸ್ಟಡಿಗೆ ವಹಿಸಿ ಆದೇಶ ಹೊರಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular