HomeKarnatakaBREAKING NEWS: ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಅರೆಸ್ಟ್

BREAKING NEWS: ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಅರೆಸ್ಟ್

ಹಾಸನ: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡನನ್ನು ಹಾಸನ ಜಿಲ್ಲೆಯ ಹೊಳೆನರಸೀಪುರ ಪೊಲೀಸರು ಬಂಧಿಸಿದ್ದಾರೆ.

ದೇವರಾಜೇಗೌಡ ವಿರುದ್ಧ ಏಪ್ರಿಲ್ 1ರಂದು ಲೈಂಗಿಕ ಕಿರುಕುಳ ಪ್ರಕರಣ ದಾಖಲಾಗಿತ್ತು. ಮೇ 10ರಂದು ಸಂತ್ರಸ್ತೆಯ ಹೇಳಿಕೆ ಪಡೆದ ಪೊಲೀಸರು, ಅತ್ಯಾಚಾರ ಕೇಸ್ ದಾಖಲಿಸಿದ್ದರು. ಬಳಿಕ ತಡರಾತ್ರಿ ಚಿತ್ರದುರ್ಗದ ಬಳಿ ದೇವರಾಜೇಗೌಡ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು.

ಇದೀಗ ವಿಚಾರಣೆ ಬಳಿಕ ದೇವರಾಜೆಗೌಡ ಅವರನ್ನು ಪೊಲೀಸರು ಬಂಧಿಸಿದ್ದಾರೆ. ವೈದ್ಯಕೀಯ ತಪಾಸಣೆ ಬಳಿಕ ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ಸಾಧ್ಯತೆ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular