BREAKING NEWS: ಸಂಸದ ಉಮೇಶ್ ಜಾದವ್ ಆಪ್ತನ ಹತ್ಯೆ ಪ್ರಕರಣ; ನಾಲ್ವರು ಆರೋಪಿಗಳು ಅರೆಸ್ಟ್

ಕಲಬುರ್ಗಿ: ಬಿಜೆಪಿ ಸಂಸದ ಉಮೇಶ್ ಜಾದವ್ ಆಪ್ತ , ಬಿಜೆಪಿ ಮುಖಂಡ ಗಿರೀಶ್ ಚಕ್ರಯನ್ನು ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಗಿರೀಶ್ ಚಕ್ರನನ್ನು ಪಾರ್ಟಿ ಕೊಡಿಸುವುದಾಗಿ ಹೇಳಿ ಕರೆದೊಯ್ದು ಕಣ್ಣಿಗೆ ಖಾರದ ಪುಡಿ ಎರಚಿ ಮಾರಕಾಸ್ತ್ರಗಳಿಂದ ಹಲ್ಲೆನಡೆಸಿ ಬರ್ಬರವಾಗಿ ಹತ್ಯೆ ಮಾಡಿದ್ದರು. ಇದೀಗ ಪ್ರಕರಣ ಸಂಬಂಧ ನಾಲ್ವರು ಹಂತಕರನ್ನು ಕಲಬುರ್ಗಿ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಕೆಲ ದಿನಗಳ ಹಿಂದಷ್ಟೇ ಸಂಸದ ಉಮೇಶ್ ಜಾದವ್ ಶಿಫಾರಸಿನ ಮೇರೆಗೆ ಗಿರೀಶ್ ಚಕ್ರನನ್ನು ದೂರ ಸಂಪರ್ಕ ಸಲಹಾ ಸದಸ್ಯನನ್ನಾಗಿ ನೇಮಕ ಮಾಡಲಾಗಿತ್ತು. ಅದೇ ಖುಷಿಯಲ್ಲಿ ಆತನ ಸಹಚರರೇ ಗುರುವಾರ ರಾತ್ರಿ ಪಾರ್ಟಿ ಕೊಡಿಸುವ ನೆಪದಲ್ಲಿ ಕರೆದೊಯ್ದು ಬರ್ಬರವಾಗಿ ಕೊಲೆಗೈದಿರುವ ಶಂಕೆ ವ್ಯಕ್ತವಾಗಿತ್ತು. ಇದೀಗ ನಾಲ್ವರು ಹಂತಕರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read