HomeKarnatakaದಾವಣಗೆರೆ ದಕ್ಷಿಣಕ್ಕೆ ಕಾಂಗ್ರೆಸ್ ಅಭ್ಯರ್ಥಿ ಹೆಸರಿಸಿದ ಬಿಜೆಪಿ ನಾಯಕ!

ದಾವಣಗೆರೆ ದಕ್ಷಿಣಕ್ಕೆ ಕಾಂಗ್ರೆಸ್ ಅಭ್ಯರ್ಥಿ ಹೆಸರಿಸಿದ ಬಿಜೆಪಿ ನಾಯಕ!

ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆ ಬಿಸಿ ಏರುತ್ತಿದೆ. ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿದ್ದ 94 ವರ್ಷದ ಶಾಮನೂರು ಶಿವಶಂಕರಪ್ಪ ನಿಧನದ ಕಾರಣ ಈಗ ಉಪ ಚುನಾವಣೆ ನಡೆಯುತ್ತಿದೆ. ಉಪ ಚುನಾವಣೆಗೆ ಕಾಂಗ್ರೆಸ್, ಬಿಜೆಪಿ ಅಭ್ಯರ್ಥಿಗಳು ಯಾರು? ಎಂಬುದು ಕುತೂಹಲ.

ಕ್ಷೇತ್ರದಲ್ಲಿ ನಡೆದ 4 ಚುನಾವಣೆಗಳಲ್ಲಿ ಶಾಮನೂರು ಶಿವಶಂಕರಪ್ಪ ಗೆದ್ದು ಕ್ಷೇತ್ರವನ್ನು ಕಾಂಗ್ರೆಸ್ ಭದ್ರಕೋಟೆ ಮಾಡಿದ್ದಾರೆ. ಇದುವರೆಗೂ ಗೆಲ್ಲದ ಕ್ಷೇತ್ರದಲ್ಲಿ ಶಾಮನೂರು ಶಿವಶಂಕರಪ್ಪ ಅನುಪಸ್ಥಿತಿಯಲ್ಲಿ ನಡೆಯುವ ಉಪ ಚುನಾವಣೆಯಲ್ಲಿ ಗೆಲ್ಲಲು ಬಿಜೆಪಿ ತಂತ್ರ ರೂಪಿಸಿದೆ.

ಕಾಂಗ್ರೆಸ್ ಟಿಕೆಟ್ ಶಾಮನೂರು ಶಿವಶಂಕರಪ್ಪ ಕುಟುಂಬಕ್ಕೆ ಸಿಗಲಿದೆಯೇ? ಅಥವ ಬೇರೆ ಕಾರ್ಯಕರ್ತರ ಪಾಲಾಗಲಿದೆಯೇ? ಎಂಬುದು ಸದ್ಯ ಚರ್ಚೆಯ ವಿಚಾರ. ಕ್ಷೇತ್ರದಲ್ಲಿ 80 ಸಾವಿರ ಮುಸ್ಲಿಂ ಮತಗಳಿದ್ದು, ಟಿಕೆಟ್ ಮುಸ್ಲಿಂ ಸಮುದಾಯಕ್ಕೆ ನೀಡಬೇಕು ಎಂಬುದು ಸದ್ಯದ ಬೇಡಿಕೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾಂಗ್ರೆಸ್ ಅಭ್ಯರ್ಥಿ ಯಾರು?; ಬಿಜೆಪಿಯ ಹಿರಿಯ ನಾಯಕ, ಮಾಜಿ ಸಚಿವ ಎಸ್.ಎ.ರವೀಂದ್ರನಾಥ್ ದಾವಣಗೆರೆ ದಕ್ಷಿಣದ ಉಪ ಚುನಾವಣೆ ಕುರಿತು ಮಾತನಾಡಿದ್ದಾರೆ. ಶಾಮನೂರು ಶಿವಶಂಕರಪ್ಪ ಕುಟುಂಬಕ್ಕೆ ಟಿಕೆಟ್ ನೀಡಬೇಕು ಎಂದು ಹೇಳಿದ್ದಾರೆ. ಕಾರಣವನ್ನು ಸಹ ಅವರು ವಿವರಿಸಿದ್ದಾರೆ.

ಶಾಮನೂರು ಶಿವಶಂಕರಪ್ಪ ಪುತ್ರ ಎಸ್.ಎಸ್.ಗಣೇಶ್ ಉಪ ಚುನಾವಣೆ ಅಭ್ಯರ್ಥಿಯಾಗಬೇಕು ಎಂದು ಎಸ್.ಎ.ರವೀಂದ್ರನಾಥ್ ಹೇಳಿದ್ದಾರೆ. ಶಾಮನೂರು ಶಿವಶಂಕರಪ್ಪ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದ ಅವರು, “ಶಾಮನೂರು ಶಿವಶಂಕರಪ್ಪ ಮನೆತನದವರು ಅಭ್ಯರ್ಥಿಯಾಗಬೇಕು ಎಂಬ ಚರ್ಚೆ ನಡೆಯುತ್ತಿದೆ. ಮಾಧ್ಯಮದಲ್ಲೂ ಇದೇ ಚರ್ಚೆಯನ್ನು ನಾನು ಗಮನಿಸಿದ್ದೇನೆ” ಎಂದರು.

“ನಾನು ವೈಯಕ್ತಿಕವಾಗಿ ಎಸ್.ಎಸ್.ಗಣೇಶ್ ಅಭ್ಯರ್ಥಿಯಾಗಲಿ ಎಂದು ಸಲಹೆ ನೀಡುತ್ತೇನೆ. ಕಾಂಗ್ರೆಸ್ ಪಕ್ಷದ ನಿರ್ಧಾರ ಏನು ಇದೆಯೋ ತಿಳಿಯದು. ನಮ್ಮ ಪಕ್ಷದ ಅಭ್ಯರ್ಥಿ ಸಹ ಸ್ಪರ್ಧೆ ಮಾಡಲಿದ್ದಾರೆ” ಎಂದು ಸ್ಪಷ್ಟಪಡಿಸಿದರು.

“1999ರಲ್ಲಿಯೇ ಒಮ್ಮೆ ಶಾಮನೂರು ಶಿವಶಂಕರಪ್ಪ ಗಣೇಶ್‌ಗೆ ಸೀಟು ಬಿಟ್ಟುಕೊಡಬೇಕಣ್ಣ ಎಂದಿದ್ದರು. ಆಗ ನಾನು ನೀವು ಬಿಟ್ಟುಕೊಡಬಹುದು. ಆದರೆ ಜನರು ಬಿಟ್ಟುಕೊಡಬೇಕಲ್ಲ ಎಂದು ಹೇಳಿದ್ದೆ. ಪಕ್ಷದ ಆಂತರಿಕ ವಿಚಾರ ಏನೇ ಇರಲಿ. ಈಗ ಎಸ್.ಎಸ್.ಗಣೇಶ್ ಸ್ಪರ್ಧಿಸುವುದು ಸೂಕ್ತ” ಎಂದು ರವೀಂದ್ರನಾಥ್ ಹೇಳಿದರು.

ಶಾಮನೂರು ಶಿವಶಂಕರಪ್ಪ ಕುಟುಂಬದಲ್ಲಿ ಈಗ ಎಸ್.ಎಸ್.ಮಲ್ಲಿಕಾರ್ಜುನ್ ದಾವಣಗೆರೆ ಉತ್ತರದ ಶಾಸಕರು, ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವರು. ಎಸ್.ಎಸ್.ಮಲ್ಲಿಕಾರ್ಜುನ್ ಪತ್ನಿ ಡಾ.ಪ್ರಭಾ ಮಲ್ಲಿಕಾರ್ಜುನ್ ದಾವಣಗೆರೆಯ ಸಂಸದರು.

ಆದ್ದರಿಂದ ಉಪಚುನಾವಣೆಯಲ್ಲಿ ಈ ಬಾರಿ ಶಾಮನೂರು ಶಿವಶಂಕರಪ್ಪ ಕುಟುಂಬದ ಹೊರತಾದ ವ್ಯಕ್ತಿಗೆ ಟಿಕೆಟ್ ನೀಡಬೇಕು ಎಂಬ ಚರ್ಚೆಗಳು ನಡೆಯುತ್ತಿವೆ. ಪಕ್ಷ ಕ್ಷೇತ್ರವನ್ನು ಕಳೆದುಕೊಳ್ಳುವುದಿಲ್ಲ ಶಾಮನೂರು ಶಿವಶಂಕರಪ್ಪ ಕುಟುಂಬದ ಒಬ್ಬರು ಕಣಕ್ಕಿಳಿದರೆ ಸುಲಭ ಎಂದು ಕಾಂಗ್ರೆಸ್ ನಾಯಕರೊಬ್ಬರು ಹೇಳಿದ್ದಾರೆ.

ಶಾಮನೂರು ಶಿವಶಂಕರಪ್ಪ ಕುಟುಂಬದಲ್ಲಿ ಹಿರಿಯ ಪುತ್ರ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಸ್.ಎಸ್.ಬಕ್ಕೇಶ್, ಉದ್ಯಮಿಯಾಗಿರುವ ಎಸ್.ಎಸ್.ಗಣೇಶ್, ಶಾಮನೂರು ಶಿವಶಂಕರಪ್ಪ ಮೊಮ್ಮಗ ಸಮರ್ಥ ಶಾಮನೂರು ಹೆಸರು ಉಪಚುನಾವಣೆಗೆ ಕೇಳಿ ಬರುತ್ತಿದೆ.

ಕಾಂಗ್ರೆಸ್ ಪಕ್ಷ ಶಾಮನೂರು ಶಿವಶಂಕರಪ್ಪ ಕುಟುಂಬದ ಅಂತಿಮ ಒಪ್ಪಿಗೆಯನ್ನು ಪಡೆದು ಮುಂದಿನ ತೀರ್ಮಾನ ಮಾಡುವ ನಿರೀಕ್ಷೆ ಇದೆ. ಕೇಂದ್ರ ಚುನಾವಣಾ ಆಯೋಗ ಯಾವಾಗ ಉಪಚುನಾವಣೆ ವೇಳಾಪಟ್ಟಿ ಪ್ರಕಟಿಸಲಿದೆ ಎಂಬುದು ಇನ್ನು ಅಂತಿವಾಗಿಲ್ಲ. ಮಾರ್ಚ್ ಅಥವ ಏಪ್ರಿಲ್‌ನಲ್ಲಿ ಉಪಚುನಾವಣೆ ನಡೆಯುವ ನಿರೀಕ್ಷೆ ಇದೆ.

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿ ಇದುವರೆಗೂ ಗೆದ್ದಿಲ್ಲ. ಆದ್ದರಿಂದ ಉಪಚುನಾವಣೆಯಲ್ಲಿ ಗೆಲ್ಲುವ ಉತ್ಸಾಹದಲ್ಲಿ ಪಕ್ಷದ ನಾಯಕರು ಇದ್ದಾರೆ. ಆದರೆ ಅಭ್ಯರ್ಥಿ ಯಾರು? ಎಂಬುದು ಇನ್ನೂ ಸಹ ಅಂತಿಮಗೊಂಡಿಲ್ಲ.

ಕ್ಷೇತ್ರದಲ್ಲಿ ಬಿಜೆಪಿಯಿಂದ 2008ರಲ್ಲಿ ಯಶವಂತರಾವ್ ಜಾಧವ್ ಸೋತಿದ್ದರು. 2013ರಲ್ಲಿ ಬಿ.ಲೋಕೇಶ್ ಶಾಮನೂರು ಶಿವಶಂಕರಪ್ಪ ವಿರುದ್ಧ ಸೋಲು ಕಂಡಿದ್ದರು. 2018 ಮತ್ತು 2023ರಲ್ಲಿ ಶಾಮನೂರು ಶಿವಶಂಕರಪ್ಪ ವಿರುದ್ಧ ಬಿಜೆಪಿ ಅಭ್ಯರ್ಥಿಯಾಗಿ ಬಿ.ಜೆ.ಅಜಯ್ ಕುಮಾರ್ ಸೋಲು ಕಂಡಿದ್ದಾರೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

Most Popular