ಅಪರಿಚಿತರಿಂದ ಗುಂಡಿನ ದಾಳಿ: ಬಿಜೆಪಿ ನಾಯಕನ ಹತ್ಯೆ

ಪಶ್ಚಿಮ ಬಂಗಾಳದ ಪುರ್ಬಾ ಬರ್ಧಮಾನ್‌ ನಲ್ಲಿ ಶನಿವಾರ ಬಿಜೆಪಿ ನಾಯಕ ರಾಜು ಝಾ ಅವರನ್ನು ಅಪರಿಚಿತರು ಗುಂಡಿಕ್ಕಿ ಕೊಂದಿದ್ದಾರೆ.

ದುರ್ಗಾಪುರ ಮೂಲದ ಉದ್ಯಮಿಯಾಗಿರುವ ರಾಜು ಝಾ, ಸಂಜೆ ಕೋಲ್ಕತ್ತಾಗೆ ತೆರಳುತ್ತಿದ್ದಾಗ ಶಕ್ತಿಗಢ ಪ್ರದೇಶದ ಮಿಠಾಯಿ ಅಂಗಡಿಯೊಂದರ ಹೊರಗೆ ಅಪರಿಚಿತರು ದಾಳಿ ನಡೆಸಿದ್ದಾರೆ.

ಬರ್ಧಮಾನ್ ಪೊಲೀಸ್ ವರಿಷ್ಠಾಧಿಕಾರಿ(ಎಸ್‌ಪಿ) ಕಮ್ನಾಸಿಸ್ ಸೇನ್, ಕಾರ್ ನಲ್ಲಿ ರಾಜು ಝಾ ಸೇರಿದಂತೆ ಮೂವರಿದ್ದರು. ಆರೋಪಿಗಳ ಉದ್ದೇಶ ಇನ್ನೂ ಪತ್ತೆಯಾಗಿಲ್ಲ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ಝಾ ಅವರನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಲಾಯಿತು. ಘಟನೆಯಲ್ಲಿ ಅವರ ಜೊತೆಗಿದ್ದ ಇತರ ವ್ಯಕ್ತಿಗಳು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಯ ನಂತರ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಎಸ್ಪಿ ತಿಳಿಸಿದ್ದಾರೆ.

ಮೃತರು ಸಿಲ್ಪಾಂಚಲ್‌ ನಲ್ಲಿ ಅಕ್ರಮ ಕಲ್ಲಿದ್ದಲು ವ್ಯವಹಾರ ನಡೆಸುತ್ತಿದ್ದರು ಎಂದು ಆರೋಪಿಸಲಾಗಿತ್ತು. ತೃಣಮೂಲ ಕಾಂಗ್ರೆಸ್(ಟಿಎಂಸಿ) ಸರ್ಕಾರದಲ್ಲಿ ಅವರ ವಿರುದ್ಧ ಹಲವಾರು ಪ್ರಕರಣಗಳು ದಾಖಲಾಗಿದ್ದವು. ಡಿಸೆಂಬರ್ 2021 ರಲ್ಲಿ ರಾಜ್ಯಾಧ್ಯಕ್ಷ ದಿಲೀಪ್ ಘೋಷ್ ಅವರ ಸಮ್ಮುಖದಲ್ಲಿ ಕಳೆದ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಅವರು ಬಿಜೆಪಿ ಸೇರಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read