BIG NEWS: ಬಿಜೆಪಿ ಮುಖಂಡನನ್ನು ಗುಂಡಿಟ್ಟು ಹತ್ಯೆಗೈದ ದುಷ್ಕರ್ಮಿಗಳು

ಪಾಟ್ನಾ: ಬಿಜೆಪಿ ಮುಖಂಡರೊಬ್ಬರನ್ನು ದುಷ್ಕರ್ಮಿಗಳು ಗುಂಡಿಟ್ಟು ಹತ್ಯೆಗೈದಿರುವ ಘಟನೆ ಬಿಹಾರದ ಪಾಟ್ನಾದ ಅಲಮ್ ಗಂಜ್ ನಲ್ಲಿ ನಡೆದಿದೆ.

ಬಜರಂಗಪುರಿ ಮಂಡಲದ ಬಿಜೆಪಿ ಮಾಜಿ ಪ್ರಧಾನ ಕಾರ್ಯದರ್ಶಿ ಅಜಯ್ ಶಾ (50) ಕೊಲೆಯಾಗಿರುವ ಬಿಜೆಪಿ ಮುಖಂಡ. ಪಾಟ್ನಾದ ಅಲಮ್ ಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಜಯ್ ಶಾ ಅವರ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ಬಜರಂಗಪುರಿ ಕಾಲುವೆ ಬಳಿ ದುಷ್ಕರ್ಮಿಗಳು ಅವರನ್ನು ಗುಂಡಿಟ್ಟು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಗುಂಡಿನ ಸದ್ದು ಕೇಳುತ್ತಿದ್ದಂತೆ ಅಜಯ್ ಶಾ ಕುಟುಂಬದವರು ಮನೆಯಿಂದ ಹೊರಬಂದು ನೋಡಿದ್ದಾರೆ. ಅಷ್ಟರಲ್ಲಿ ಶಾ ಗುಂಡೇಟಿನಿಂದ ಗಾಯಗೊಂಡು ಬಿದ್ದಿದ್ದರು. ತಕ್ಷಣ ಅವರನ್ನು ಆಸ್ಪತೆಗೆ ಕರೆದೊಯ್ಯಲಾಗಿದೆ ಆದರೆ ಅವರು ಸಾವನ್ನಪ್ಪಿದ್ದಾರೆ ಎಂದು ವೈದೈರು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಆಗಮಿಸಿರುವ ಪಾಟ್ನಾ ಸಿಟಿ ಎ ಎಸ್ ಪಿ ಶರತ್ ಆರ್.ಎಸ್ ಪರಿಶೀಲನೆ ನಡೆಸಿದ್ದಾರೆ. ತನಿಖೆ ಆರಂಭಿಸಲಾಗಿದೆ. ದುಷ್ಕರ್ಮಿಗಳ ಪತ್ತೆಗಾಗಿ ಸಿಸಿಟಿ ಪರಿಶೀಲನೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read