HomeKarnatakaBREAKING NEWS: ಬೆಂಗಳೂರಿನಲ್ಲಿ ಬಿಜೆಪಿ ನಾಯಕಿ ಆತ್ಮಹತ್ಯೆ!

BREAKING NEWS: ಬೆಂಗಳೂರಿನಲ್ಲಿ ಬಿಜೆಪಿ ನಾಯಕಿ ಆತ್ಮಹತ್ಯೆ!

ಬೆಂಗಳೂರು: ಬೆಂಗಳೂರಿನಲ್ಲಿ ಬಿಜೆಪಿ ಸ್ಥಳೀಯ ನಾಯಕಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ಮಂಜುಳಾ ಆತ್ಮಹತ್ಯೆಗೆ ಶರಣಾದ ಬಿಜೆಪಿ ಮುಖಂಡೆ. ಬಿಜೆಪಿ ಮಲ್ಲೇಶ್ವರಂ ಮಂಡಲ ಕಾರ್ಯದರ್ಶಿಯಾಗಿದ್ದ ಮಂಜುಳಾ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮತ್ತಿಕೆರೆಯ ತಮ್ಮ ನಿವಾಸದಲ್ಲಿಯೇ ಮಂಜುಳಾ ಇಂದು ಮಧ್ಯಾಹ್ನ 2:30ರ ಸುಮಾರಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಡೆತ್ ನೋಟ್ ನಲ್ಲಿ ನನ್ನ ಸಾವಿಗೆ ನಾನೇ ಕಾರಣ ಎಂದು ಬರೆದಿಟ್ಟಿದ್ದಾರೆ. ಮಂಜುಳಾ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟನಾ ಸ್ಥಳಕ್ಕೆ ಯಶವಂತಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular