‘ಮೈಸೂರು ಚಲೋ’ಗೆ ಮುನ್ನ ಬಿಜೆಪಿ ನಾಯಕರ ನೆರೆ ಪರಿಶೀಲನೆ ಪ್ರವಾಸ: 6 ತಂಡ ರಚನೆ

ಬೆಂಗಳೂರು: ಮೈಸೂರು ಪಾದಯಾತ್ರೆಗೆ ಮುನ್ನ ಪ್ರವಾಹ ಪೀಡಿತ ಸ್ಥಳಗಳಿಗೆ ಬಿಜೆಪಿ ನಾಯಕರು ಭೇಟಿ ನೀಡಲಿದ್ದಾರೆ.

ರಾಜ್ಯದ ಅನೇಕ ಕಡೆ ಅತಿವೃಷ್ಟಿ, ನೆರೆಹಾವಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಮೈಸೂರು ಚಲೋ ಹಮ್ಮಿಕೊಂಡರೆ ಸಾರ್ವಜನಿಕರ ಟೀಕೆ ಎದುರಾಗಬಹುದೆಂಬ ಕಾರಣಕ್ಕೆ ಬಿಜೆಪಿ ನೆರೆ ಪೀಡಿತ ಪ್ರದೇಶಗಳಿಗೆ ಪ್ರವಾಸ ಕೈಗೊಂಡಿದೆ. ಇದಕ್ಕಾಗಿ ಆರು ತಂಡಗಳನ್ನು ರಚಿಸಲಾಗಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ, ಉಪ ನಾಯಕ ಅರವಿಂದ್ ಬೆಲ್ಲದ, ಅಶ್ವತ್ಥ್ ನಾರಾಯಣ, ಆರಗ ಜ್ಞಾನೇಂದ್ರ, ಛಲವಾದ ನಾರಾಯಣಸ್ವಾಮಿ ನೇತೃತ್ವದ ತಂಡಗಳನ್ನು ರಚಿಸಲಾಗಿದ್ದು, ಇಂದಿನಿಂದಲೇ ರಾಜ್ಯದ ವಿವಿಧ ಪ್ರವಾಹ ಪೀಡಿತ ಸ್ಥಳಗಳಿಗೆ ಭೇಟಿ ನೀಡಲಿರುವ ಬಿಜೆಪಿ ನಾಯಕರು ಸಮಸ್ಯೆ ಆಲಿಸಲಿದ್ದಾರೆ.

ಆರು ತಂಡಗಳು ಮಂಗಳವಾರ ಮತ್ತು ಬುಧವಾರ ಎರಡು ದಿನಗಳ ಕಾಲ ರಾಜ್ಯದ ವಿವಿಧ ನೆರಪೀಡಿತ ಪ್ರದೇಶಗಳಲ್ಲಿ ಪ್ರವಾಸ ನಡೆಸಲಿದ್ದಾರೆ. ಕೊಡಗು, ಹಾಸನ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಉತ್ತರ ಕನ್ನಡ, ಬಾಗಲಕೋಟೆ, ವಿಜಯಪುರ, ರಾಯಚೂರು ಮೊದಲಾದ ಜಿಲ್ಲೆಗಳಿಗೆ ಭೇಟಿ ನೀಡಲಿದ್ದು, ಜಿಲ್ಲೆಗಳಲ್ಲಿ ಎಷ್ಟು ಪ್ರಮಾಣದಲ್ಲಿ ಹಾನಿಯಾಗಿದೆ, ಏನು ಹಾನಿಯಾಗಿದೆ, ಯಾವ ರೀತಿಯ ತೊಂದರೆಯಾಗಿದೆ, ಉಸ್ತುವಾರಿ ಸಚಿವರು ಭೇಟಿ ನೀಡಿದ್ದಾರೆಯೇ? ಅಧಿಕಾರಿಗಳು ಸಮರ್ಪಕವಾಗಿ ಪರಿಹಾರ ಕಾರ್ಯ ನಡೆಸುತ್ತಿದ್ದಾರೆಯೇ ಎಂಬುದರ ಬಗ್ಗೆ ಪರಿಶೀಲನೆ ನಡೆಸಲಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read