HomeKarnatakaಬಂಡಾಯ ಬಾವುಟ ಹಾರಿಸಿದ ಈಶ್ವರಪ್ಪ ನಿವಾಸಕ್ಕೆ ಬಿಜೆಪಿ ನಾಯಕರ ದೌಡು: ಮನವೊಲಿಸಲು ಹರಸಾಹಸ

ಬಂಡಾಯ ಬಾವುಟ ಹಾರಿಸಿದ ಈಶ್ವರಪ್ಪ ನಿವಾಸಕ್ಕೆ ಬಿಜೆಪಿ ನಾಯಕರ ದೌಡು: ಮನವೊಲಿಸಲು ಹರಸಾಹಸ

ಶಿವಮೊಗ್ಗ: ಪುತ್ರನಿಗೆ ಟಿಕೆಟ್ ತಪ್ಪಿದ್ದಕ್ಕೆ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಬಂಡಾಯ ಬಾವುಟ ಹಾರಿಸಿದ್ದು, ಅವರ ಬಂಡಾಯ ಶಮನಕ್ಕೆ ಬಿಜೆಪಿ ನಾಯಕರು ಹರಸಾಹಸ ನಡೆಸಿದ್ದಾರೆ.

ಹಾವೇರಿ ಲೋಕಸಭೆ ಕ್ಷೇತ್ರದಲ್ಲಿ ಪುತ್ರನಿಗೆ ಟಿಕೆಟ್ ಸಿಗದಿರುವುದಕ್ಕೆ ಈಶ್ವರಪ್ಪ ಅಸಮಾಧಾನಗೊಂಡಿದ್ದು, ಶಿವಮೊಗ್ಗ ಕ್ಷೇತ್ರದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ. ಈಗಾಗಲೇ ಸಭೆ ನಡೆಸಿ ಕಾರ್ಯಪ್ರವೃತ್ತರಾಗಿದ್ದಾರೆ.

ನಾಳೆ ಶಿವಮೊಗ್ಗಕ್ಕೆ ಪ್ರಧಾನಿ ಮೋದಿ ಭೇಟಿ ಹಿನ್ನೆಲೆಯಲ್ಲಿ ಈಶ್ವರಪ್ಪ ನಿವಾಸಕ್ಕೆ ಬಿಜೆಪಿ ಮೂವರು ನಾಯಕರು ಆಗಮಿಸಿದ್ದಾರೆ. ಶಿವಮೊಗ್ಗದಲ್ಲಿರುವ ಮಾಜಿ ಸಚಿವ ಈಶ್ವರಪ್ಪ ನಿವಾಸಕ್ಕೆ ಮಾಜಿ ಸಚಿವ ಅರಗ ಜ್ಞಾನೇಂದ್ರ, ವಿಧಾನ ಪರಿಷತ್ ಸದಸ್ಯರಾದ ಎನ್. ರವಿಕುಮಾರ್, ಡಿ.ಎಸ್. ಅರುಣ್ ಭೇಟಿ ನೀಡಿದ್ದಾರೆ. ಈಶ್ವರಪ್ಪ ಜೊತೆ ಒಂದು ಗಂಟೆಗೂ ಅಧಿಕ ಕಾಲ ಬಿಜೆಪಿ ನಾಯಕರು ಚರ್ಚೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿಜೆಪಿ ಮುಖಂಡರ ಮನವಿಗೆ ಈಶ್ವರಪ್ಪ ಸ್ಪಂದಿಸಿಲ್ಲ. ನನ್ನ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ. ಸ್ಪರ್ಧೆ ಖಚಿತವೆಂದು ಹೇಳಿದ್ದಾರೆನ್ನಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular