ಬೆಂಗಳೂರು: ಒಳ ಮೀಸಲಾತಿ ವಿಚಾರವಾಗಿ ನಡೆದಿದ್ದ ಪ್ರತಿಭಟನೆಗೆ ಸಂಬಂಧಿಸಿದಂತೆ ಬಿಜೆಪಿ ಮುಖಂಡರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಸೆಪ್ಟೆಂಬರ್ 10 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಒಳ ಮೀಸಲಾತಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ ನಡೆದಿತ್ತು. ಪ್ರತಿಭಟನಾಕಾರರು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದರು. ಬ್ಯಾರಿಕೇಡ್ ಗಳನ್ನು ತಳ್ಳಿ ಆಕ್ರೋಶ ವ್ಯಕ್ತಪಡಿಸಿದ್ದರು. ಸಾರ್ವಜನಿಕರ ವಾಹನ ಸಂಚಾರಕ್ಕೂ ಅಡ್ಡಿಯುಂಟಾಗಿತ್ತು. ಈ ವೇಳೆ ಪೊಲೀಸರು ಪ್ರತಿಭಟನಾಕಾರರ ನಡುವೆ ವಾಗ್ವಾದ, ನೂಕಾಟ ತಳ್ಳಾಟ ನಡೆದಿತ್ತು.
ಈ ಪ್ರತಿಭಟನೆಗೆ ಸಂಬಂಧಿಸಿದಂತೆ ಇದೀಗ ಬಿಜೆಪಿ ಮುಖಂಡರ ವಿರುದ್ಧ ಪ್ರಕರಣ ದಾಖಲಾಗಿದೆ. ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್.ಹರೀಶ್ ಸೇರಿ ಹಲಹವ ವಿರುದ್ಧ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.